Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶೈನ್‌ನಿಂದ ಉಚಿತ ತರಬೇತಿ ಕಾರ್ಯಾಗಾರಗಳು ನಡೆಯುತ್ತಿರುವುದು ಶ್ಲಾಘನೀಯ: ಸಂಸದ ಕೋಟ
    ಊರ್ಮನೆ ಸಮಾಚಾರ

    ವಿಶೈನ್‌ನಿಂದ ಉಚಿತ ತರಬೇತಿ ಕಾರ್ಯಾಗಾರಗಳು ನಡೆಯುತ್ತಿರುವುದು ಶ್ಲಾಘನೀಯ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿಗಳು ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ನೈತಿಕ ಶಕ್ತಿಯನ್ನು ನೀಡುತ್ತವೆ. ಆಯ್ಕೆ ಪ್ರಕ್ರಿಯೆಯಲ್ಲಿ ಸರ್ಕಾರದಲ್ಲಿ ನೇರ ನೇಮಕಾತಿ ಹಾಗೂ ಸಂದರ್ಶನ ಎಂಬ ಎರಡು ನಿಯಮಗಳಿವೆ. ಇದರ ಜೊತೆಗೆ ಸಂದರ್ಶನ ಎನ್ನುವ ತಂತ್ರಗಾರಿಕೆಯೂ ಇದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾದ ಶಿಕ್ಷಕ ಹುದ್ದೆಗಳ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರು ಸಂದರ್ಶನದಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಯಾಗುವ ಘಟನೆಗಳೂ ನಡೆಯುತ್ತವೆ. ಆದರೆ ನ್ಯಾಯಲಯಗಳು ತಡೆಯಾಜ್ಞೆ ನೀಡದೇ ಇರುವ ಒಂದೇ ಒಂದು ನಿಯಮ ಎಂದರೆ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಹಾಗೂ ರೋಸ್ಟರ್ ಪದ್ದತಿಯಲ್ಲಿ ನೇಮಕಾತಿ ಮಾಡುವುದು. ಮೆರಿಟ್ ಇದ್ದೂ ಪರೀಕ್ಷಾ ಪೂರ್ವ ಸಿದ್ಧತೆಗಳಿಲ್ಲದಿದ್ದರೆ ಅಭ್ಯರ್ಥಿಗಳ ಆಯ್ಕೆಗೆ ತೊಡಕಾಗುತ್ತದೆ. ಆ ನಿಟ್ಟಿನಲ್ಲಿ ವಿಶೈನ್ ಕೋಚಿಂಗ್ ಸೆಂಟರ್ ಉಚಿತ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯ

    ಮುಖ್ಯ ಅತಿಥಿಗಳಾಗಿ ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿ ಶೈನ್ ಕೋಚಿಂಗ್ ಸೆಂಟರ್ ಉಚಿತ ಕಾರ್ಯಾಗಾರಗಳನ್ನು ನಡೆಸುತ್ತಿದ್ದು, ಇದರಿಂದ ಪರೀಕ್ಷಾರ್ಥಿಗಳಿಗೆ ಗರಿಷ್ಟ ಅನುಕೂಲವಾಗಿದೆ. ವಿಶೈನ್ ಸಂಸ್ಥೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.

    ಉದ್ಯಮಿ ಬೆಳ್ವೆ ಗಣೇಶ್ ಕಿಣಿ ಮಾತನಾಡಿ, ಮನುಷ್ಯ ಬದುಕಿರುವಷ್ಟು ಕಾಲ ಸಮಾಜಕ್ಕೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎನ್ನುವ ತುಡಿತವಿದ್ದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ಅಂತಹಾ ಕೆಲಸವನ್ನು ವಿಶೈನ್ ಕೋಚಿಂಗ್ ಸೆಂಟರ್ ಮಾಡುತ್ತಿದೆ ಎಂದು ಹೇಳಿದರು. ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ಕಾನೂನಿನ ತೊಡಕುಗಳ ನಡುವೆಯೂ ಸರ್ಕಾರದ ನೇಮಕಾತಿ ಪ್ರಕ್ರಿಯೆಗಳಲ್ಲಿ ಭಾಗವಹಿಸಿ ಉದ್ಯೋಗ ಗಟಿಟ್ಟಿಸಿಕೊಳ್ಳುವಲ್ಲಿ ಪ್ರವೇಶ ಪರೀಕ್ಷೆಗಳು ಮಹತ್ವ ಪಡೆಯುತ್ತವೆ. ಆ ನಿಟ್ಟಿನಲ್ಲಿ ವಿಶೈನ್ ಕೋಚಿಂಗ್ ಸೆಂಟರ್ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

    Click here

    Click here

    Click here

    Call us

    Call us

    ತಾಲೂಕು ಪಂಚಾಯತ್ ಬ್ರಹ್ಮಾವರ ಇದರ ಯೋಜನಾ ನಿರ್ದೇಶಕ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು. ಇದೇ ಸಂದರ್ಭ ತರಬೇತಿ ಸಂದರ್ಭ ನಡೆಸಲಾದ ಅಣುಕು ಪರೀಕ್ಷೆಯಲ್ಲಿ (ಮೋಕ್ ಟೆಸ್ಟ್) ಅತ್ಯಂತ ಗರಿಷ್ಟ ಅಂಕ ಪಡೆದ ಮಂಗಳೂರು ಗುರುಪುರದ ನೇಹಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಪ್ರಸಾದ್ ಬಿಲ್ಲವ ಸ್ವಾಗತಿಸಿದರು. ವಿವೇಕ ಅಮೀನ್ ವಂದಿಸಿದರು. ವಿಶೈನ್ ಕೋಚಿಂಗ್ ಸೆಂಟರ್‌ನ ನಿರ್ದೇಶಕರಲ್ಲಿ ಒಬ್ಬರಾದ ಹರೀಶ್ ಕುಮಾರ್ ಶೆಟ್ಟಿ ಪ್ರಾಸ್ತಾವಿಸಿ ಸ್ವಾಗತಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ರಳ್ಳಿ ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ ಗಣೇಶ್‌, ಕಾರ್ಯದರ್ಶಿ ಶ್ರೀಲತಾ ಸುರೇಂದ್ರ ಆಯ್ಕೆ

    23/09/2026

    ಡಾ. ಪ್ರದೀಪ್ ಕೆಂಚನೂರು ಅವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

    23/09/2026

    ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಜನತಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

    23/09/2026
    Leave A Reply Cancel Reply

    13 − 8 =

    Call us

    Click Here

    Call us

    Call us

    Call us
    Highest Viewed Recently
    • ಉಪ್ರಳ್ಳಿ ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ ಗಣೇಶ್‌, ಕಾರ್ಯದರ್ಶಿ ಶ್ರೀಲತಾ ಸುರೇಂದ್ರ ಆಯ್ಕೆ
    • ವಿಶೈನ್‌ನಿಂದ ಉಚಿತ ತರಬೇತಿ ಕಾರ್ಯಾಗಾರಗಳು ನಡೆಯುತ್ತಿರುವುದು ಶ್ಲಾಘನೀಯ: ಸಂಸದ ಕೋಟ
    • ಡಾ. ಪ್ರದೀಪ್ ಕೆಂಚನೂರು ಅವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ
    • ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಜನತಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ
    • ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.