ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಸಾಕ್ಷಿ, ಪ್ರೀತಿ, ಶಿವಮಣಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ.
ಕ್ರೀಡಾ ಕೌಶಲ್ಯ ಮೆರೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.











