ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೆಕ್ಕಟ್ಟೆಯ ವಿಶ್ವ ವಿನಾಯಕ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿ ಯುಕ್ತಿ ಶೆಟ್ಟಿ ಅವರು, 21ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ – 2026ರಲ್ಲಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯನ್ನು ಐಡಿಯಲ್ ಪ್ಲೇ ಅಬ್ಯಾಕಸ್ ಇಂಡಿಯಾ ಪ್ರೈ. ಲಿ. ಸಂಸ್ಥೆಯು ಆಯೋಜಿಸಲಾಗಿತ್ತು.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











