ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಬರುವ ಕಾರಂತಜ್ಜಿಯರು ಬರೇ ಸುಕ್ಕುಗಟ್ಟಿದ ವಯಸ್ಸಾದ ಅಜ್ಜಿಯರಲ್ಲ ಶತಶತಮಾನಗಳ ಪ್ರಬುದ್ಧತೆಯನ್ನು ವಿಚಾರಧಾರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮುದುಕಿಯರು ಎಂದು ಭಂಡಾರಕಾರ್ಸ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿಯಾದ ಡಾ. ರೇಖಾ ವಿ. ಬನ್ನಾಡಿ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಲ್ಲಿನ ಕನ್ನಡ ವಿಭಾಗ ಮತ್ತು ‘ಗಿಳಿವಿಂಡು’ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದೊಂದಿಗೆ “ಬಾರಿಸು ಕನ್ನಡ ಡಿಂಡಿಮವ” “ಗಿಳಿವಿಂಡು ಯಾನ ಮರಳಿ ಮನೆಗೆ” ಎಂಬ ಕಾರ್ಯಕ್ರಮದ ಅಂಗವಾಗಿ ನಡೆದ ‘ಕಾರಂತಜ್ಜಿಯರು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು
ಗಿಳಿವಿಂಡು ಇದರ ಅಧ್ಯಕ್ಷರಾದ ಬಿ. ಶಿವರಾಮ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ತಾನು ಕಲಿತ ಸಂಸ್ಥೆಯ ಋಣವಿರುತ್ತದೆ ಹಾಗಾಗಿ ಕಲಿತ ಸಂಸ್ಥೆಯನ್ನು ಎಂದಿಗೂ ಮರೆಯಬಾರದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಹಿತ್ಯದ ಓದಿನ ಪ್ರಾಮುಖ್ಯತೆ ತಿಳಿಸಿ ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ ಕಟ್ಟುವ ಸಂಸ್ಕೃತಿ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸತ್ಯನಾರಾಯಣ ಹಾಗೂ ವಿವಿಧ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗೋವಿಂದ ದಾಸ್ ಕಾಲೇಜು ಸುರತ್ಕಲ್ ಇದರ ನಿವೃತ್ತ ಪ್ರಾಂಶುಪಾಲರಾದ ಕೃಷ್ಣಮೂರ್ತಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕಿಯರಾದ ಅರ್ಚನಾ ಶೆಟ್ಟಿ ಮತ್ತು ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಕೆ.ಎಸ್. ಸ್ವಾಗತಿಸಿ, ಉಪನ್ಯಾಸಕಿ ಮಮತಾ ನಿರೂಪಿಸಿ, ಡಾ. ಮೋಹನ್ ಬಿ. ವಂದಿಸಿದರು.
















