ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಇವರ ಆಸರೆಯಲ್ಲಿ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಸೃಷ್ಠಿ ಆರ್. (73 ಕೆಜಿ), ಜನನಿ (49 ಕೆಜಿ), ಅಮೂಲ್ಯ( 40 ಕೆಜಿ) ವಿಭಾಗದಲ್ಲಿ ಆಯ್ಕೆಯಾಗಿದ್ದು ರಾಜ್ಯ ಮಟ್ಟಕ್ಕೆ ಅರ್ಹತೆ ಹೊಂದಿರುತ್ತಾರೆ.
ಒಟ್ಟು ಜಿಲ್ಲಾ ಸ್ಪರ್ಧೆಯಲ್ಲಿ ಒಂಬತ್ತು ಪುರಸ್ಕಾರಗಳು ಪಡೆದಿದ್ದು ವಿಜೇತರನ್ನು ಮತ್ತು ತರಬೇತಿಗೊಳಿಸಿದ ದೈಹಿಕ ಶಿಕ್ಷಕಿಯಾದ ಮಮತಾ ಅವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರೇಮಾನಂದ್ ಮತ್ತು ಆಡಳಿತ ಮಂಡಳಿ ಅಭಿನಂದಿಸಿ ಶುಭ ಹಾರೈಸಿದೆ











