ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಸೆ.25: ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಗೀಡಾಗಿರುವ ಕುಂದಾಪುರದ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಶವ ಶಾರ್ಜಾದಿಂದ ಇಂದು ವಿಮಾನದ ಮೂಲಕ ಹುಟ್ಟೂರಿಗೆ ಬರಲಿದೆ.
ಗುರುವಾರ ರಾತ್ರಿ 11 ಗಂಟೆಗೆ ಶಾರ್ಜಾದಿಂದ ಪ್ರಕಾಶ್ ಅವರ ಸಂಬಂಧಿಕರು ಹಾಗೂ ಕಂಪೆನಿಯವರು ವಿಮಾನದಲ್ಲಿ ಪಾರ್ಥಿವ ಶರೀರದೊಂದಿಗೆ ಹೊರಟಿದ್ದು, ಶುಕ್ರವಾರ ಬೆಳಗಿನ ಜಾವ 4-5 ಗಂಟೆಯ ಸುಮಾರಿಗೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಕಳೆದ 14 ವರ್ಷಗಳಿಂದ ಶಾರ್ಜಾದಲ್ಲಿ ಸಿಮನ್ಸ್ ಕಂಪೆನಿಯ ಖಾಸಗಿ ವಿಮಾನ ಯಾನ ಸಂಸ್ಥೆಯ ಟರ್ಮಿನಲ್ – 2ರಲ್ಲಿ ಹಿರಿಯ – ಮ್ಯಾನೇಜರ್ ಆಗಿದ್ದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಮೃತದೇಹವು ಆ.12 ರಂದು ಅಲ್ ಅಮಿನ್ ಎಂಬ ರಸ್ತೆಯ ಪಾರ್ಕಿಂಗ್ ಪ್ರದೇಶದಲ್ಲಿ ಅವರದೇ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ಜತೆಗಿದ್ದ ಪತ್ನಿ ಹಾಗೂ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ ► ಕುಂದಾಪುರ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಕೊಲೆ. ಪತ್ನಿ, ಪುತ್ರ ನಾಪತ್ತೆ – https://kundapraa.com/?p=102439 .











