ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜೆಸಿಐ ಬೈಂದೂರು ಸಿಟಿ ಹಾಗೂ ಜೆಸಿಐ ಶಿರೂರು ರೂರಲ್ ಇವರ ಜಂಟಿ ಆಶ್ರಯದಲ್ಲಿ, ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗತ್ವದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿ ಮುಖಂಡರಿಗೆ (ಲೀಡರ್ಸ್) ವಿಶೇಷ ತರಬೇತಿ ಶಿಬಿರವನ್ನು ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಮುಖ್ಯ ತರಬೇತುದಾರರಾಗಿ ಭಾಗವಹಿಸಿದ್ದ ಜೆಸಿಐ ರಾಷ್ಟ್ರೀಯ ತರಬೇತುದಾರರು ಹಾಗೂ ಜೆಸಿಐ ವಲಯ 15ರ ಮಾಜಿ ವಲಯಾಧ್ಯಕ್ಷರಾದ ಜೆಸಿ ಬಿ.ಎ. ಅಭಿಲಾಷ್ ಅವರು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು, ಸಂವಹನ ಕಲೆ, ಹೊಣೆಗಾರಿಕೆ ಮತ್ತು ಗುರಿ ನಿರ್ವಹಣೆ ಕುರಿತು ಆಕರ್ಷಕ ಚಟುವಟಿಕೆಗಳ ಮೂಲಕ ಅತ್ಯುತ್ತಮ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಉಮೇಶ್ ಮಯ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಭವಿಷ್ಯದ ಉತ್ತಮ ಪ್ರಜೆಗಳಾಗಲು ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಜೆಸಿಐ ಬೈಂದೂರು ಸಿಟಿಯ ಮಾಜಿ ಅಧ್ಯಕ್ಷರಾದ ರಾಜು ಮೊಗವೀರ ಹಾಗೂ ಪ್ರಿಯದರ್ಶಿನಿ ಬೆಸ್ಕೂರು, ಜೆಸಿಐ ಶಿರೂರು ರೂರಲ್ ಅಧ್ಯಕ್ಷರಾದ ವಿನೋದ್ ಮೇಸ್ತಾ, ಕಾರ್ಯದರ್ಶಿ ಪವನ್, ಜೆಸಿಐ ಶಿರೂರು ರೂರಲ್ ಮಾಜಿ ಅಧ್ಯಕ್ಷರಾದ ಪ್ರಸಾದ್ ಪ್ರಭು, ಜೆಸಿಐ ಬೈಂದೂರು ಸಿಟಿಯ ಸ್ಥಾಪಕಾಧ್ಯಕ್ಷರಾದ ಮಣಿಕಂಠ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ನೂರಾರು ವಿದ್ಯಾರ್ಥಿ ಪ್ರತಿನಿಧಿಗಳು ಸಕ್ರಿಯವಾಗಿ ಪಾಲ್ಗೊಂಡು ತರಬೇತಿಯ ಸದುಪಯೋಗ ಪಡೆದುಕೊಂಡರು.
















