Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲ್ತೋಡು: 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
    ಊರ್ಮನೆ ಸಮಾಚಾರ

    ಕಾಲ್ತೋಡು: 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಂದಿನ ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರೂ ಆರೋಗ್ಯ ಸಮಸ್ಯೆಯಿಂದ  ಬಳಲುತ್ತಿದ್ದೇವೆ. ಧಾವಂತದ ಬದುಕಿನಲ್ಲಿ ಆಹಾರ ಆರೋಗ್ಯದ ಕಡೆ ಗಮನ  ಕಡಿಮೆಯಾಗಿದೆ. ಆಯುರ್ವೇದದಲ್ಲಿ ತಿಳಿಸಿದ ದಿನಚರ್ಯೆ, ಋತುಚರ್ಯೆ, ಆಹಾರ ವಿಹಾರಗಳನ್ನ ಅನುಸರಿಸುವುದರಿಂದ ನಾವು ಆರೋಗ್ಯವಂತರಾಗಿರಬಹುದು ಅಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು ಎಂದು ಕಾಲ್ತೋಡು ಗ್ರಾಮ ಪಂಚಾಯತ್ ಕಾರ್ಯದರ್ಶಿ ಆನಂದ ಬಿಲ್ಲವ ನುಡಿದರು.

    Click Here

    Call us

    Click Here

    ಅವರು ಆಯುಷ್ ಇಲಾಖೆ ಉಡುಪಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಆಯುಷ್ಮಾನ್ ಆರೋಗ್ಯ ಮಂದಿರ ಕಾಲ್ತೋಡು ಇವರು ಆಯೋಜಿಸಿರುವ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಉಪನ್ಯಾಸ ಹಾಗೂ ಚಿಕಿತ್ಸಾ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

    ಕಾರ್ಯಕ್ರಮದ ಆಯೋಜಕರು ಆಯುಷ್ಮಾನ್ ಆರೋಗ್ಯ ಮಂದಿರ ಕಾಲ್ತೋಡು ಇದರ ವೈದ್ಯಾಧಿಕಾರಿಗಳಾದ ಡಾಕ್ಟರ್ ವೀಣಾ ಕಾರಂತರವರು 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಘೋಷ ವಾಕ್ಯ “ಆರೋಗ್ಯಕರ ನಾಳೆಗಾಗಿ ಆಯುರ್ವೇದ” ಬಗ್ಗೆ ತಿಳಿಸುತ್ತಾ ನಾವು ನಾಳೆ ಆರೋಗ್ಯವಂತರಾಗಿರಬೇಕು ಅಂತಂದ್ರೆ ಆಯುರ್ವೇದದ ಮೂಲ ಸಿದ್ಧಾಂತಗಳನ್ನ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಆಯುರ್ವೇದ ಆಹಾರ ಪದ್ಧತಿ ದಿನಚರ್ಯೆ, ಋತುಚರ್ಯೆ, ಸದ್ವ್ರತ್ತ ಪಾಲನೆ ಮುಂತಾದವುಗಳ ಬಗ್ಗೆ ಸಾರ್ವಜನಿಕರಿಗೆ ಉಪನ್ಯಾಸ ನೀಡಿದರು. ನಂತರ 11ನೇ ಆಯುರ್ವೇದ ದಿವಸದ ಪ್ರತಿಜ್ಞಾವಿಧಿ  ಬೋಧಿಸಿದರು.

    ವೇದಿಕೆಯಲ್ಲಿ ಶ್ರೀಯುತ ಕಿರಿಮಂಜೇಶ್ವರ ಸುಭಾಷ್ ಪ್ರಾಥಮಿಕ ಆರೋಗ್ಯ ಕೇಂದ್ರ  ಸಿಎಚ್ಒ ಸಂಜೀವ ಶೆಟ್ಟಿ, ಯೋಗ ತರಬೇತುದಾರಾದ ಶೇಖರ್ ಶೆಟ್ಟಿ  ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಆಯುರ್ವೇದ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಆಯುರ್ವೇದ ಮಾಹಿತಿಯುಳ್ಳ ಕರಪತ್ರಗಳು, ಔಷಧೀಯ ಸಸ್ಯಗಳಾದ ಅಮೃತಬಳ್ಳಿ, ಸಂದು ಬಳ್ಳಿ, ವೀಳ್ಯದೆಲೆ, ದೊಡ್ಡಪತ್ರೆ ಮುಂತಾದವುಗಳನ್ನ ವಿತರಿಸಲಾಯಿತು. ಆಯುಷ್ ಆರೋಗ್ಯಕರ ಕಷಾಯ ತಯಾರಿಸುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಜೊತೆಯಲ್ಲಿ ಕಷಾಯವನ್ನು ವಿತರಿಸಲಾಯಿತು.

    ನಂತರ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಿ ಔಷಧಿ ವಿತರಿಸಲಾಯಿತು. ಗ್ರಾಮ ಪಂಚಾಯತ್ ಕಾಲ್ತೋಡು ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಚಿಕಿತ್ಸಾಲಯದ ಸಿಬ್ಬಂದಿಗಳಾದ ನಾಗದೀಪಾ, ವಿಶಾಲ ಕಾರ್ಯಕ್ರಮಕ್ಕೆ ಸಹಕರಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆರೋಗ್ಯ ಹಾಗೂ ಆತ್ಮಜ್ಞಾನ ಬೇರೆಬೇರೆಯಲ್ಲ: ಶ್ರೀ ರಾಘವೇಶ್ವರ

    25/09/2026

    ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರಿಗೆ ತರಬೇತಿ ಶಿಬಿರ

    25/09/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

    25/09/2026
    Leave A Reply Cancel Reply

    twelve − 7 =

    Call us

    Click Here

    Call us

    Call us

    Call us
    Highest Viewed Recently
    • ಆರೋಗ್ಯ ಹಾಗೂ ಆತ್ಮಜ್ಞಾನ ಬೇರೆಬೇರೆಯಲ್ಲ: ಶ್ರೀ ರಾಘವೇಶ್ವರ
    • ಕಾಲ್ತೋಡು: 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪಿ.ಸಿ.ಓ.ಡಿ ಸಮಸ್ಯೆ – ಪರಿಹಾರʼ ವಿಶೇಷ ಉಪನ್ಯಾಸ
    • ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರಿಗೆ ತರಬೇತಿ ಶಿಬಿರ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.