ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026ರ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಆತೀಶ್ ಎಸ್. ಪೂಜಾರಿ (5ನೇ ತರಗತಿ) ಪ್ರಥಮ ಸ್ಥಾನ, ಅಮಯ್ ಪಿ. ಶ್ರೀಯಾನ್ (6ನೇ ತರಗತಿ) ತೃತೀಯ ಸ್ಥಾನ ಹಾಗೂ ಚಾರ್ವಿಕಾ ಜಿ. ಖಾರ್ವಿ (6ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.











