ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಎ.ವಿ ಹಾಲ್‌ನಲ್ಲಿ ನಡೆಯಿತು.
ವ್ಯವವಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ, ಹವ್ಯಾಸಿ ಯಕ್ಷಗಾನ ಕಲಾವಿದ ರವಿನಂದನ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ಯಕ್ಷಗಾನ, ಹೆಜ್ಜೆಗಳು, ಯಕ್ಷಗಾನದ ಪೂರ್ವರಂಗ, ತಾಳ ಹಾಗೂ ವಿವಿಧ ಮಟ್ಟುಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಹಮ್ಮಿಕೊಳ್ಳಲಾಗುವ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಹಾಗೂ ಯಕ್ಷಗಾನ ಸಂಘದ ಸಂಯೋಜಕ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ವಿದ್ಯಾರ್ಥಿಗಳಾದ ಶಿಲ್ಪ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಮೇಘನಾ ಸ್ವಾಗತಿಸಿ, ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.











