ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ weight lifting ಚಾಂಪಿಯನ್‌ಶಿಪ್‌ನಲ್ಲಿ ತೆಕ್ಕೆಟ್ಟೆಯ ವಿಶ್ವ ವಿನಾಯಕ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.
ಈ ಸಾಧನೆ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಸಲ್ಲಿಸಿದ್ದಾರೆ.











