ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅನ್ವಿತ್ ಪೂಜಾರಿ ಬಾಕ್ಸಿಂಗ್ ಅಖಾಡದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ದಿತೀಜ್ ಬೆಳ್ಳಿ ಪದಕದ ಸಾಧನೆಯೊಂದಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.











