Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ
    alvas nudisiri

    ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭಾಂಶದೊAದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಇದರ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು.

    Click Here

    Call us

    Click Here

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯ ಸೇವೆಯ ಅಗತ್ಯವಿರುವ ಜನರಿಗೆ ಗುಣಮಟ್ಟದ ಹಾಗೂ ಕೈಗೆಟಕುವ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಂತಹ ಕೊಡುಗೆಗಳು ಮಹತ್ವದ್ದಾಗಿವೆ.  

    ಆಳ್ವಾಸ್ ಸಹಕಾರ ಸಂಘವು ಕಳೆದ ಒಂದು ದಶಕದಿಂದ ತನ್ನ ಕಾರ್ಯಚಟುವಟಿಕೆಗಳ ಮೂಲಕ ಉತ್ತಮ ಆರ್ಥಿಕ ಫಲಿತಾಂಶ ದಾಖಲಿಸುವುದರ ಜೊತೆಗೆ, ಸಂಘದ ಉದ್ದೇಶಕ್ಕೆ ಅನುಗುಣವಾಗಿ ಲಾಭಾಂಶದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮೂಲಕ ಸಮಾಜದ ವಿವಿಧ ವರ್ಗಗಳ ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಡಯಾಲಿಸಿಸ್ ಯಂತ್ರಗಳ ಕೊಡುಗೆಯೂ ಇದೇ ಸಾಮಾಜಿಕ ಬದ್ಧತೆಯ ಮುಂದುವರಿದ ಭಾಗವಾಗಿದೆ.

    ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ನಿಯಮಿತ ಡಯಾಲಿಸಿಸ್ ಚಿಕಿತ್ಸೆಯ ಅಗತ್ಯವಿರುತ್ತದೆ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ನಾಲ್ಕು ಯಂತ್ರಗಳು ಲಭ್ಯವಾಗುವುದರಿಂದ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಡಯಾಲಿಸಿಸ್ ಸೇವೆಯ ಸಾಮರ್ಥ್ಯ ಹೆಚ್ಚಲಿದ್ದು, ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ ಸಮಯೋಚಿತವಾಗಿ ಚಿಕಿತ್ಸೆ ಒದಗಿಸಲು ಸಹಕಾರಿಯಾಗಲಿದೆ. ಇದರಿಂದ ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸ್ಥಳೀಯವಾಗಿಯೇ ಅಗತ್ಯ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಮುಖ್ಯ ಅತಿಥಿಯಾಗಿ ಭಾರತ್ ಇನ್‌ಫ್ರಾಸ್ಟ್ರಕ್ಚರ್, ಆಡಳಿತ ನಿರ್ದೇಶಕ ಮೊಹಮದ್ ಮುಸ್ತಫಾ, ವೈದ್ಯರಾದ ಡಾ. ರೇವತಿ ಭಟ್, ಡಾ. ಸದಾನಂದ ನಾಯಕ್, ಡಾ. ಹರೀಶ್ ನಾಯಕ್, ಆಳ್ವಾಸ್ ಸಹಕಾರ ಸಂಘದ ನಿರ್ದೇಶಕ ನಾರಾಯಣ ಪಿ.ಎಂ., ಜಯರಾಂ ಕೋಟ್ಯಾನ್, ಪ್ರಕಾಶಿನಿ ಹೆಗ್ಡೆ, ಡಾ. ಕುರಿಯನ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಪಿತ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್

    28/09/2026

    ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

    28/09/2026

    ಬಾಕ್ಸಿಂಗ್‌: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಅನ್ವಿತ್‌ಗೆ ಚಿನ್ನದ ಪದಕ. ರಾಜ್ಯ ಮಟ್ಟಕ್ಕೆ ಆಯ್ಕೆ

    28/09/2026
    Leave A Reply Cancel Reply

    twelve + seven =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್
    • ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
    • ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
    • ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ
    • ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.