ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಕುಂದಾಪುರದ ಬಿ.ಎಸ್‌ಸಿ. ನರ್ಸಿಂಗ್ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳ ವತಿಯಿಂದ ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಕಮಲಾ ಬಾಳಿಗ ಮೆಮೋರಿಯಲ್ ಹಾಲ್, ಎ.ವಿ. ಬಾಳಿಗ ಆಸ್ಪತ್ರೆ, ದೊಡ್ಡಣಗುಡ್ಡೆ ಉಡುಪಿ ಇಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ತಡೆಗಟ್ಟುವಿಕೆಯ ಕುರಿತು ಜಾಗೃತಿ ಮೂಡಿಸುವುದು, ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸುವುದು ಹಾಗೂ ಭಾವನಾತ್ಮಕ ಸಂಕಷ್ಟದಲ್ಲಿರುವವರು ಸಮಯೋಚಿತವಾಗಿ ಸಹಾಯ ಮತ್ತು ಬೆಂಬಲವನ್ನು ಪಡೆಯುವಂತೆ ಪ್ರೇರೇಪಿಸುವುದಾಗಿತ್ತು.
ಕಾರ್ಯಕ್ರಮಕ್ಕೆ ಎ.ವಿ.ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹಾಗೂ ನರ್ಸಿಂಗ್ ಸೂಪರಿಂಟೆಂಡೆಂಟ್ ಪ್ರಮೀಳಾ ಡಿಸೋಜಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಸಹಾಯಕ ಉಪನ್ಯಾಸಕಿ ಚೇತನಾ ಆರ್. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಿಂಚನಾ ನಿರೂಪಿಸಿದರು. ಅಂಕಿತಾ ಸ್ವಾಗತ ಭಾಷಣ ಮಾಡಿದರು ಹಾಗೂ ಶೋಭಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಿಂದ ನೃತ್ಯ, ಮನೋವೈಜ್ಞಾನಿಕ ಆಟ, ಆತ್ಮಹತ್ಯೆ ತಡೆಗಟ್ಟುವಿಕೆ ಕುರಿತ ಕಿರು ನಾಟಕವನ್ನು ಪ್ರದರ್ಶಿಸಲಾಯಿತು.
ಕಿರು ನಾಟಕದ ಮೂಲಕ ಸಂಕಷ್ಟದಲ್ಲಿರುವವರೊಂದಿಗೆ ಸಹಾನುಭೂತಿಯಿಂದ ನಡೆದುಕೊಳ್ಳುವುದು, ಪರಿಣಾಮಕಾರಿ ಸಂವಹನ, ಭಾವನಾತ್ಮಕ ಬೆಂಬಲ ನೀಡುವುದು, ಎಚ್ಚರಿಕೆಯ ಲಕ್ಷಣಗಳನ್ನು ಗುರುತಿಸುವುದು ಹಾಗೂ ಅಗತ್ಯವಿದ್ದಾಗ ಸಮಯೋಚಿತ ವೃತ್ತಿಪರ ಸಹಾಯ ಪಡೆಯುವುದು ಮುಂತಾದ ಪ್ರಮುಖ ಸಂದೇಶಗಳನ್ನು ನೀಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಶ್ರೇಯಾ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮವು “ಪ್ರತಿಯೊಂದು ಜೀವವೂ ಅಮೂಲ್ಯ; ಯಾರೂ ತಮ್ಮ ಸಂಕಷ್ಟವನ್ನು ಏಕಾಂಗಿಯಾಗಿ ಎದುರಿಸಬೇಕಾಗಿಲ್ಲ” ಎಂಬ ಮಹತ್ವದ ಸಂದೇಶವನ್ನು ಸಾರುವ ಮೂಲಕ ಯಶಸ್ವಿಯಾಗಿ .
















