ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಮನೋಭಾವನೆಯಿಂದ ಹಾಗೂ ಕಾನೂನು ಸಲಹಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಆಸಕ್ತರು ಸೆಪ್ಟಂಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯ, ಉಡುಪಿ ಇದರ ವೆಬ್‌ಸೈಟ್ ಅಥವಾ ಸಮೀಪದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.











