ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ 14 ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು ವೆಬ್‌ಸೈಟ್: https://sevaone.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.











