ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸಹಾಯವನ್ನು ಪಡೆದು ಮುಂದೆ ಉದ್ಯೋಗ ಪಡೆದ ನಂತರ ಇನ್ನಷ್ಟು ಜನರಿಗೆ ಧನ ಸಹಾಯ ಮಾಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಅರಿಯಬೇಕು ಎಂದು ಕುಂದಾಪುರದ ರೋಟರಿ ಕ್ಲಬ್ ದಕ್ಷಿಣದ ಅಧ್ಯಕ್ಷ ಡಾ. ಆದರ್ಶ ಹೆಬ್ಬಾರ್ ಹೇಳಿದರು.
ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸುಪ್ರಿಯಾ ಕಾಮತ್ ಬ್ಯಾನರ್ಜಿ ಸ್ಕಾಲರ್‌ಶಿಪ್ ಹಸ್ತಾಂತರಿಸಿ ಮಾತನಾಡಿದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಮಾನಂದ ಕಾರಂತ್ ಸ್ಕಾಲರ್‌ಶಿಪ್ ಚೆಕ್ ಹಸ್ತಾಂತರಿಸಿ ಆಶಯ ನುಡಿಗಳನ್ನಾಡಿದರು.
ಈ ಸಂದರ್ಭ ಮನೋಹರ್ ಪಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಕಾರ್ಯಕ್ರಮ ಸಂಯೋಜಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
















