ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ (ಹೆಚ್.ಐವಿ/ಏಡ್ಸ್ ಸೋಂಕಿತ/ಬಾದಿತ ಮಹಿಳೆಯರಿಗೆ), ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ (ಟ್ರಾನ್ಸ್ಜೆಂರ‍್ಸ್ ವ್ಯಕ್ತಿಗಳಿಗೆ), ಚೇತನಾ ಯೋಜನೆ (ದಮನಿತ ಮಹಿಳೆಯರಿಗೆ) ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಬಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅಥವಾ ಉಡುಪಿ ದೂ.ಸಂಖ್ಯೆ 0820-2524055, ಕುಂದಾಪುರ ದೂ.ಸಂಖ್ಯೆ: 08254-230807, ಕಾರ್ಕಳ ದೂ.ಸಂಖ್ಯೆ 08258-230992 ಹಾಗೂ ಬ್ರಹ್ಮಾವರ ದೂ.ಸಂಖ್ಯೆ 0820-2562244 ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.











