ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ (Students’ Welfare Council) 2026-27ನೇ ಸಾಲಿನ ಪದಗ್ರಹಣ ಸಮಾರಂಭವು ಸೋಮವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
ಬಾರ್ಕೂರಿನ ಎಸ್.ಆರ್.ಎಸ್.ಎಂ.ಎನ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ನೂತನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಸದಸ್ಯರಿಗೆ ಶುಭಹಾರೈಸಿ, ವಿದ್ಯಾರ್ಥಿಗಳು ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಡಾ. ಎಂ. ವಿಶ್ವನಾಥ ಪೈ ಅವರ ನೇತೃತ್ವದಲ್ಲಿ ಪದಗ್ರಹಣ ಹಾಗೂ ಪ್ರಮಾಣ ವಚನ ಸ್ವೀಕಾರ ನಡೆಯಿತು. ಸಂಘದ ಕಾರ್ಯದರ್ಶಿಗಳಿಗೆ ದಾಖಲೆಗಳ ಫೋಲ್ಡರ್‌ಗಳನ್ನು ಹಸ್ತಾಂತರಿಸಲಾಯಿತು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಜಿ. ಪೈ, ಎಂಜಿಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಹಾಗೂ ಟಿಎಂಎ ಪೈ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನ ನಿರ್ದೇಶಕ ಟಿ. ರಂಗ ಪೈ, ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಬಿಕಾಂ ಹಾಗೂ ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಈ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
2026-27ನೇ ಸಾಲಿನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿ ಸುಶಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಪಂಚಮಿ ಅಧಿಕಾರ ವಹಿಸಿಕೊಂಡರು. ಉಪಾಧ್ಯಕ್ಷರಾಗಿ ರಾಮಚಂದ್ರ ವೈ. ನಾಯಕ್, ದಿಶಾನ್ ಡಿ. ಕರ್ಕೇರ ಹಾಗೂ ಅಭಿಜಿತ್ ಎಂ.ಬಿ., ಜಂಟಿ ಕಾರ್ಯದರ್ಶಿಗಳಾಗಿ ಸ್ನೇಹಾ ಆರ್., ಶ್ರೀಜನ್ ಕಾಮತ್ ಹಾಗೂ ಜಾರಾ ಕೌಸರ್ ಆಯ್ಕೆಯಾಗಿದ್ದಾರೆ. ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರತೀಕ್ ಮತ್ತು ಬಿ. ಸಂಸ್ಕೃತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಚಿಂತನಾ ಆರ್. ಕೋಟ್ಯಾನ್ ಹಾಗೂ ಸಾಹಿತ್ಯ ಕಾರ್ಯದರ್ಶಿಯಾಗಿ ಖುಷಿ ಆರ್. ಜವಾಬ್ದಾರಿ ವಹಿಸಿಕೊಂಡರು.
ಕಾರ್ಯಕ್ರಮವು ಸವಿನಯ ಹಾಗೂ ತಂಡದ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಅಧ್ಯಕ್ಷ ಸುಶಾಂತ್ ಸ್ವಾಗತಿಸಿ, ಕಾರ್ಯಕ್ರಮವನ್ನು ಅದಿತಿ ಕರ್ಕೇರ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಪಂಚಮಿ ವಂದಿಸಿದರು.
















