ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೋದಿಜಿ ಅವರ 25 ವರ್ಷಗಳ ಸೇವಾ ಪಯಣ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಫೂರ್ತಿ. ಅಂತ್ಯೋದಯದ ಮಂತ್ರದೊಂದಿಗೆ ಕೊನೆಯ ವ್ಯಕ್ತಿಯನ್ನು ತಲುಪುವುದೇ ಈ ಸೇವಾ ಸಂಕಲ್ಪ ಅಭಿಯಾನದ ಉದ್ದೇಶ. ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ ೨೫ ವ?ಗಳ ಸಾರ್ವಜನಿಕ ಸೇವೆಯನ್ನು ಹಾಗೂ ದೇಶದ ಅಭಿವೃದ್ಧಿ ಅಹರ್ನಿಶಿ ದುಡಿಯುತ್ತಿರುವ ನರೇಂದ್ರ ಮೋದಿಯವರನ್ನು ದೇಶದ ಪ್ರತಿಯೊಬ್ಬ ನಾಗರಿಕ ಸ್ಮರಿಸಿಕೊಳ್ಳಬೇಕು ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಹೇಳಿದರು.
ಅವರು ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಬುಧವಾರ ಜರಗಿದ ’ಅಂಗನ್ ಕಾ ಮಿಲನ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್ ವಹಿಸಿದ್ದರು. ಇದೇ ಸಂದರ್ಭ ಶಿಶು ಮಂದಿರದ ಮಾತಾಜಿ ಪ್ರೇಮಾ ಮತ್ತು ಸಹಾಯಕಿ ರತ್ನಾ ಅವರನ್ನು ಸಮ್ಮಾನಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಸಿಹಿತಿಂಡಿ ವಿತರಿಸಲಾಯಿತು.
ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ ವಸ್ರೆ, ಮಹಿಳಾ ಮೋರ್ಚಾ ಪ್ರಭಾರಿ ಶಾಂತಿ ಅಶೋಕ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಾ ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರ ಖಾರ್ವಿ, ಶಿಶು ಮಂದಿರದ ಸದಸ್ಯರಾದ ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಪೋಷಕರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಗ್ರಾಪಂ. ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿ, ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ ವಂದಿಸಿದರು.
















