ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪುರಸಭೆ ಸದಸ್ಯರಾಗಿ ಮೂರು ಅವಧಿಗೆ ಕಾರ್ಯನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆಜಿ ನಿತ್ಯಾನಂದ (ನಿತ್ಯಣ್ಣ) (62) ಅವರು ಅನಾರೋಗ್ಯದಿಂದ ಗುರುವಾರ ಆಸ್ಪತ್ರೆಯಲ್ಲಿ ನಿಧನರಾದರು.
ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ಗುರುತಿಸಿಕೊಂಡಿದ್ದ ಅವರು, ಎನ್‌ಎಸ್‌ಐಯು, ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹೋಟೇಲ್ ಹಾಗೂ ಬಸ್ ಉದ್ಯಮಿಯಾಗಿದ್ದ ಅವರು ಉತ್ತಮ ಕಬಡ್ಡಿ ಆಟಗಾರರಾಗಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದರು.











