Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 25 ವರ್ಷಗಳ ನಿರಂತರ ಸೇವೆ ದೇಶಕ್ಕೆ ದಿಕ್ಸೂಚಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    25 ವರ್ಷಗಳ ನಿರಂತರ ಸೇವೆ ದೇಶಕ್ಕೆ ದಿಕ್ಸೂಚಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸೇವಾ, ಸುಶಾಸನ ಮತ್ತು ಬಡವರ ಕಲ್ಯಾಣದ ಆಡಳಿತದ 25 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಅಂಗನ್ ಉತ್ಸವ ನೆರವೇರಿತು.

    Click Here

    Call us

    Click Here

    ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು, “ಮೋದಿಜಿ ಅವರ ನೇತೃತ್ವದಲ್ಲಿ ಅಂಗನವಾಡಿ ವ್ಯವಸ್ಥೆಗೆ ಹೊಸ ಆಯಾಮ ಸಿಕ್ಕಿದೆ. ಪೋಷಣ್ ಅಭಿಯಾನದ ಮೂಲಕ ಅಪೌಷ್ಟಿಕತೆ ಮುಕ್ತ ಭಾರತದ ಸಂಕಲ್ಪ ಸಾಕಾರವಾಗುತ್ತಿದೆ ಎಂದರು.

    ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿಯೇ 25 ವರ್ಷ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಮೋದಿಜಿ ತೋರಿದ ಅಭಿವೃದ್ಧಿ ಮಾದರಿ ಇಂದು ಜಗತ್ತಿಗೇ ಮಾದರಿಯಾಗಿದೆ” ಎಂದರು.

    ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ “ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ನಮ್ಮ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಕೆಲಸ ಈ ಅಭಿಯಾನದ ಮೂಲಕ ಆಗುತ್ತಿದೆ. ಶಾಲಾ ಮಕ್ಕಳಿಗೆ ಪೌಷ್ಟಿಕತೆ ಜೊತೆ ಸಂಸ್ಕಾರ ನೀಡುವುದೇ ವಿಕಸಿತ ಭಾರತದ ಅಡಿಪಾಯ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ವಹಿಸಿದ್ದರು. ಈ ಸಂದರ್ಭದಲ್ಲಿ ವ್ಯಾಪ್ತಿಯ ಆಶಾ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಉಪಾಧ್ಯಕ್ಷರಾದ ಕಾಡೂರು ಸುರೇಶ್ ಶೆಟ್ಟಿ, ಜ್ಯೋತಿ ಉದಯ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ, ಮಹಿಳಾ ಮೋರ್ಚಾ ಪ್ರಭಾರಿ ರೂಪಾ ಬಾಬು ಪೈ, ಅಭಿಯಾನದ ಸಹ ಸಂಚಾಲಕ ಸುರೇಂದ್ರ ಕಾಂಚನ್ ಸಂಗಮ್, ಕಿರಣ್ ಪೂಜಾರಿ ತೆಕ್ಕಟ್ಟೆ, ಸುನೀಲ್ ಶೆಟ್ಟಿ ಹೇರಿಕುದ್ರು, ಜಿ.ಪಂ ಮಾಜಿ ಸದಸ್ಯರಾದ ರಾಘವೇಂದ್ರ ಕಾಂಚನ್ ಬಾರಿಕೆರೆ, ಶ್ರೀಲತಾ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕೋಟ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಸತೀಶ್ ಕುಂದರ್, ರವೀಂದ್ರ ತಿಂಗಳಾಯ, ವಾಸು ಪೂಜಾರಿ, , ಜ್ಯೋತಿ, ಅಶ್ವಿನಿ,, ಸರಸ್ವತಿ, ರವಿ ಕಾಂಚನ್,, ರತ್ನಾಕರ ಪೂಜಾರಿ, ಅನಿಲ್ ಹಂದಟ್ಟು, ಪ್ರಶಾಂತ್ ಮಡ್ಪಾಡಿ,,ಸೇರಿದಂತೆ ಅನೇಕ ಪ್ರಮುಖರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

    ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಶ್ವೇತಾ ಶ್ರೀನಿಧಿ ಉಪಾಧ್ಯಾಯ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ

    02/10/2026

    ಮಣೂರು ಪಡುಕರೆ: ವಿಠ್ಠಲ್ ವಿ ಗಾಂವ್ಕರ್ ಪದ ಪುಷ್ಪಾಂಜಲಿಯ ಭಾವ ನಮನ

    02/10/2026

    ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಜಿ ನಿತ್ಯಾನಂದ ನಿಧನ

    02/10/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ
    • ಭಾರತ–ಭೂತಾನ್ ಯುವ ಸ್ನೇಹ ಶಿಬಿರಕ್ಕೆ ಆಳ್ವಾಸ್ ಕೆಡೆಟ್ ನಿಷ್ಮಾ ಪೂಜಾರಿ ಆಯ್ಕೆ
    • 25 ವರ್ಷಗಳ ನಿರಂತರ ಸೇವೆ ದೇಶಕ್ಕೆ ದಿಕ್ಸೂಚಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಮಣೂರು ಪಡುಕರೆ: ವಿಠ್ಠಲ್ ವಿ ಗಾಂವ್ಕರ್ ಪದ ಪುಷ್ಪಾಂಜಲಿಯ ಭಾವ ನಮನ
    • ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಜಿ ನಿತ್ಯಾನಂದ ನಿಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.