ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್‌ಬಹದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಶುಕ್ರವಾರದಂದು ಗೌರವ ಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಗಾಂಧೀಜಿ ಮತ್ತು ಲಾಲ್‌ಬಹದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಹಾಗೆಯೇ ಗಾಂಧೀಜಿ ಮತ್ತು ಶಾಸ್ತ್ರಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಪ್ರಾಂಶುಪಾಲರು, ಆಡಳಿತ ನಿರ್ದೇಶಕರು, ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.











