Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
    ಊರ್ಮನೆ ಸಮಾಚಾರ

    ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೊಲ್ಲೂರು
    : ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.

    Click Here

    Call us

    Click Here

    ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದರು. ಈ ದೃಶ್ಯಾವಳಿಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸ್ಕ್ರಿಮೊಹಮ್ಮದ್ ಸಿನಾನ್ (20) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Click here

    Click here

    Click here

    Call us

    Call us

    ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾ‌ರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿದರು. ಹೆಡ್‌ಕಾನ್ ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

    02/10/2026

    ಕೃಷಿ ಕೂಲಿ ಕಾರ್ಮಿಕರ ಗುರುತಿಸುವ ಪಂಚವರ್ಣದ ರೈತರೆಡೆಗೆ ಕಾರ್ಯ ನಿಜಕ್ಕೂ ಶ್ಲಾಘನೀಯ: ಡಾ. ಕೆ. ಕೃಷ್ಣ ಕಾಂಚನ್

    02/10/2026

    ಕುಂದಾಪುರ: ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ

    02/10/2026
    Leave A Reply Cancel Reply

    sixteen + twenty =

    Call us

    Click Here

    Call us

    Call us

    Call us
    Highest Viewed Recently
    • ಜನತಾ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ
    • ಕೃಷಿ ಕೂಲಿ ಕಾರ್ಮಿಕರ ಗುರುತಿಸುವ ಪಂಚವರ್ಣದ ರೈತರೆಡೆಗೆ ಕಾರ್ಯ ನಿಜಕ್ಕೂ ಶ್ಲಾಘನೀಯ: ಡಾ. ಕೆ. ಕೃಷ್ಣ ಕಾಂಚನ್
    • ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
    • ಕುಂದಾಪುರ: ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ
    • ತೆಕ್ಕಟ್ಟೆ ವಿಶ್ವವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಗಾಂಧೀ ಜಯಂತಿ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.