Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
    ಊರ್ಮನೆ ಸಮಾಚಾರ

    ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಕ್ಯಾಂಪಸ್‌ನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ವಚ್ಛತಾ ಅಭಿಯಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದ ಆರಂಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ  ಗೌರವ ನಮನಗಳನ್ನು ಸಲ್ಲಿಸಲಾಯಿತು.

    ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಸರಳತೆ, ಸತ್ಯ, ಅಹಿಂಸೆ ಹಾಗೂ ಶಿಸ್ತಿನಂತಹ ಮಹೋನ್ನತ ಜೀವನ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.

    ಅತಿಥಿಗಳಾಗಿ ಆಗಮಿಸಿದ್ದ ಯಡಾಡಿ-ಮತ್ಯಾಡಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ  ಮಧುಸೂದನ್ ಪ್ರಸಾದ್ ಅವರು ಮಾತನಾಡಿ, “ದಿನಾಚರಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಸ್ವಚ್ಛ ಪರಿಸರವನ್ನು ನಿರ್ಮಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು,” ಎಂದು ಸಂದೇಶ ನೀಡಿದರು.

    ಸಮಾಜ ವಿಜ್ಞಾನ ಶಿಕ್ಷಕಿ ಪ್ರೀತಿ ಅವರು ಮಾತನಾಡಿ, ಗಾಂಧಿ ಜಯಂತಿಯ ಆಚರಣೆಯ ಹಿನ್ನೆಲೆ ಮತ್ತು ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸತ್ಯ, ಅಹಿಂಸೆ, ಶಿಸ್ತು ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ಅರಿವು ಮೂಡಿಸಿದರು.

    Click here

    Click here

    Click here

    Call us

    Call us

    ದಿನಾಚರಣೆಯ ಅಂಗವಾಗಿ ಗುಡ್ಡೆಯಂಗಡಿ ಪೇಟೆಯಿಂದ ಜನಜಾಗೃತಿ ಜಾಥಾ ಮತ್ತು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನಕ್ಕೆ ‘ಕಟಿಲೇಶ್ವರಿ ಡೆವಲಪರ್ಸ್’ನ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಕಾಶ್ ಶೆಟ್ಟಿ ಅವರು ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ‌ ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನ ಪ್ರಾಂಶುಪಾಲರಾದ ಅನಿತಾ ಕುಮಾರಿ,ಉಪಪ್ರಾಂಶುಪಾಲರಾದ ಸ್ಪೂರ್ತಿ  ಎ. ಉಪಸ್ಥಿತರಿದ್ದರು.

    ಸಂಸ್ಕೃತ ಉಪನ್ಯಾಸಕರಾದ ರಜತ್ ಭಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ

    03/10/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ

    03/10/2026

    ಯುವಶಕ್ತಿ, ತಂತ್ರಜ್ಞಾನ ಮತ್ತು ಸೇವಾ ಮನೋಭಾವ ದೇಶದ ಭವಿಷ್ಯ ರೂಪಿಸಲಿ: ವಿವೇಕ ಆಳ್ವ

    03/10/2026
    Leave A Reply Cancel Reply

    fifteen + one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ
    • ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
    • ಯುವಶಕ್ತಿ, ತಂತ್ರಜ್ಞಾನ ಮತ್ತು ಸೇವಾ ಮನೋಭಾವ ದೇಶದ ಭವಿಷ್ಯ ರೂಪಿಸಲಿ: ವಿವೇಕ ಆಳ್ವ
    • ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ ಯೋಜನೆಯಡಿ ವಿವಿಧ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.