ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ರಕ್ಷಕ – ಶಿಕ್ಷಕರ ಸಂಘದ ಸಭೆಯು ಶನಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳಿವೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಅವರು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಂತಾಗಲಿ. ನಾವೆಲ್ಲರೂ ಸೇರಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸೋಣ ಎಂದು ಹೇಳಿದರು.
ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಯೇ ಅತ್ಯುತ್ತಮ ಸಂಸ್ಥೆಯಾಗಿದೆ. ಎಲ್ಲಾ ರೀತಿಯ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಇಲ್ಲಿ ಅವಕಾಶವಿದೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವಲ್ಲಿ ಭಂಡಾರ್ಕಾರ್ಸ್ ಕಾಲೇಜು ಮುಂದಿರುತ್ತದೆ. ಅಲ್ಲದೇ ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಒಳ್ಳೆಯ ಆಸಕ್ತಿದಾಯಕ ಕ್ಷೇತ್ರದಲ್ಲಿ ಅವರನ್ನು ಮುಂದುವರಿಯಲು ಅವು ಮಾಡಿಕೊಡಬೇಕು. ಅವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ 2026-27ನೇ ಸಾಲಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅನಂತ ನಾಯಕ್ , ಉಪಾಧ್ಯಕ್ಷರಾಗಿ ಪರಿಮಳಾ ವಿ.ಅಡಿಗ ಮತ್ತು ಕಾರ್ಯದರ್ಶಿಗಳಾಗಿ ಸಾವಿತ್ರಿ ಅವರನ್ನು ಆಯ್ಕೆ ಮಾಡಲಾಯಿತು
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ರಕ್ಷಕ -ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಅರುಣ್ ಎ.ಎಸ್. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಓಂಶ್ರೀ ವಂದಿಸಿದರು.
















