Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ
    ಉಡುಪಿ ಜಿಲ್ಲೆ

    ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿ ಹೊಂದಿರುವ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ, ಸವಲತ್ತುಗಳನ್ನು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದ ಮುರ್ಗೋಳಿಹಕ್ಲು ನಂದಿಕೇಶ್ವರ ಸಭಾಭವನದಲ್ಲಿ, ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬೈಂದೂರು ಇವರ ವತಿಯಿಂದ ಬೈಂದೂರು ಹೋಬಳಿಯ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಜಾಸೇವಾ ಆಂದೋಲನ ಸಭೆಯು ಸರಕಾರದ ಒಂದು ಉತ್ತಮ ಕಲ್ಪನೆಯಾಗಿದ್ದು, ಸಭೆಯ ಬಗ್ಗೆ ಹೆಚ್ಚಿನ ಪ್ರಚಾರ ಮೂಡಿಸುವುದರೊಂದಿಗೆ ಜನರು ಈ ಕಾರ್ಯಕ್ರಮದ ಬಗ್ಗೆ ವಿಶ್ವಾಸ ಹೊಂದುವಂತೆ ಮಾಡಿ, ಕಾರ್ಯಕ್ರಮದ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಸಭೆಗಳಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಆಲಿಸಿ, ಅವುಗಳಿಗೆ ಪರಿಣಾಮಕಾರಿ ಹಾಗೂ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

    ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರಿರುವಲ್ಲಿಗೆ ಹೋಗಬೇಕು. ಸಭೆಗಳಲ್ಲಿ ಸಲ್ಲಿಸಿದ ಅಹವಾಲುಗಳನ್ನು ನಿರಂತರ ಫಾಲೋ ಅಪ್ ಮಾಡಬೇಕು. ಜನರ ಸೇವೆಗೆ ಪ್ರಧಾನ ಆದ್ಯತೆ ನೀಡಬೇಕು. ಇದೊಂದು ಜನಪರ ಕಾಳಜಿಯುತ ಕಾರ್ಯಕ್ರಮ ಆಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಒಂದೆಡೆ ಸೇರಿಸಿ ಜನರ ಸಮಸ್ಯೆ /ಅಹವಾಲು ಆಲಿಸಿ, ಸ್ಥಳದಲ್ಲಿಯೇ ಅಧಿಕಾರಿಗಳ ಮೂಲಕ ಪರಿಹಾರ ಕಲ್ಪಿಸುವ ಈ ಕಾರ್ಯಕ್ರಮವು ಸಮರ್ಪಕವಾಗಿ ಜನರಿಗೆ ತಲುಪಿದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕರು ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಬಹಳಷ್ಟು ಅಲೆದಾಡುವುದನ್ನು ಕಂಡು ಅದನ್ನು ತಪ್ಪಿಸಿ, ಸರಕಾರ ಅವರುಗಳ ಮನೆ ಬಾಗಿಲಿಗೆ ತೆರಳಿ, ಕಾಲ ಮಿತಿಯೊಳಗೆ ಅವರ ಅಹವಾಲುಗಳಿಗೆ ಗುಣತ್ಮಕ ಪರಿಹಾರ ಕಲ್ಪಿಸುವುದರೊಂದಿಗೆ ಸರಕಾರ ಜನರ ಸೇವೆಗೆ ಸದಾ ಸಿದ್ಧವಾಗಿದೆ ಎಂಬ ಭಾವನೆ ಜನರಲ್ಲಿ ಮೂಡಿಸುವ ಉದ್ದೇಶದಿಂದ ಸರಕಾರವು ಪ್ರಜಾಸೇವಾ ಆಂದೋಲನ ಸಭೆ ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದರು.

    Click here

    Click here

    Click here

    Call us

    Call us

    ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯುತ್ತಿದ್ದು, ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಭೆಗಳನ್ನು ಒಂದೊಂದು ತಾಲೂಕಿನಲ್ಲಿ ಹಾಗೂ ಎರಡು ಮತ್ತು ನಾಲ್ಕನೇ ಶನಿವಾರದಂದು ಶಾಸಕರುಗಳ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸುವುದರೊಂದಿಗೆ ಆದಷ್ಟು ಜನರಿರುವ ಸ್ಥಳಕ್ಕೆ ಹೋಗಿ ಅವರ ಸಮಸ್ಯೆ ಪರಿಹಾರ ನೀಡಲಿದ್ದಾರೆ. ಸೇವೆಯೇ ನಮ್ಮ ಧರ್ಮ ಎಂಬ ಸೇವಾ ಮನೋಭಾವದೊಂದಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ದ್ವನಿಯಾಗುವುದರೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದರು.

    ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಮಾತನಾಡಿ, ಸರಕಾರ ಎನ್ನುವುದು ಜನರ ಬಳಿ ತೆರಳುವುದರೊಂದಿಗೆ ಜನರ ಅಹವಾಲುಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದ ಅವರು ಕಾರ್ಯಕ್ರಮ ನಡೆಯುವ ಕುರಿತು ಹೆಚ್ಚಿನ ಅರಿವನ್ನು ಸಾರ್ವಜನಿಕರಿಗೆ ಮೂಡಿಸಬೇಕು ಎಂದರು.  

    ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 54 ಅರ್ಜಿಗಳು ಸಲ್ಲಿಕೆಯಾಗಿದ್ದವು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ನಂದಿಕೇಶ್ವರ ಯುವಕ ಸಮಾಜದ ಅಧ್ಯಕ್ಷ ಶ್ರೀನಿವಾಸ ದೇವಾಡಿಗ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಊರಿನ ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಬೈಂದೂರು ಬಿ.ಇ.ಓ ಗಣೇಶ್ ನಾಯ್ಕ್ ಸ್ವಾಗತಿಸಿ, ಉಪ್ಪುಂದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಕೇಶವ ನಾಯಕ್ ನಿರೂಪಿಸಿ, ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನಲ್ಲಿ ‘ವಾಕ್ – ಸ್ಟೆಪ್ ಬೈ ಸ್ಟೆಪ್ – ಪ್ರೇರಣಾದಾಯಕ ಕಾರ್ಯಕ್ರಮ

    01/10/2026

    ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮ ಮಂಡಳಿಯ ಪದಗ್ರಹಣ

    30/09/2026

    ಉಡುಪಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    30/09/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಹುಟ್ಟೂರಿನಲ್ಲೇ ಆರೋಗ್ಯ‌ ಕ್ರಾಂತಿ – ಚಿತ್ರಕೂಟ ಆಯುರ್ವೇದ ಉದ್ಘಾಟನೆಯಲ್ಲಿ ಗಣ್ಯರ ಶ್ಲಾಘನೆ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ
    • ಯೋಗಾಸನ: ಆಳ್ವಾಸ್‌ನ ಪುರುಷರ ತಂಡವು ಚಾಂಪಿಯನ್‌ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ
    • ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ
    • ಡಾ .ಬಿ.ಬಿ. ಹೆಗ್ಡೆ ಕಾಲೇಜು: ಮೂಟ್ ಕೋರ್ಟ್ ಮಾದರಿಯ ಅಂತರ್ ತರಗತಿ ಕಾನೂನು ಸ್ಪರ್ಧೆ ʼವಿಧಿಕ್ತʼ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.