Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಉದ್ಘಾಟನೆ
    ಊರ್ಮನೆ ಸಮಾಚಾರ

    ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ನಗರದ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.

    Click Here

    Call us

    Click Here

    ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ, ಇಂದಿನ ಮಕ್ಕಳಲ್ಲಿ ಪ್ರತಿಭೆ ಅಪಾರವಾಗಿದೆ. ಪ್ರತಿಭೆಯನ್ನು ಹೊರತರುವಲ್ಲಿ ಚಿತ್ರಕಲೆ, ಪ್ರಬಂಧ, ಭಾಷಣ ಹಾಗೂ ವಿವಿಧ ಸೃಜನಾತ್ಮಕ ಸ್ಪರ್ಧೆಗಳು  ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಇಂತಹ ಸ್ಪರ್ಧೆಗಳು ಕೇವಲ ಬಹುಮಾನಕ್ಕಾಗಿ ಮಾತ್ರವಲ್ಲದೇ ಮಕ್ಕಳ ಕಲ್ಪನಾಶಕ್ತಿ ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಬೆಳೆಸುವ ವೇದಿಕೆಯಾಗಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು, ಸ್ಪರ್ಧೆಯ ಮೂಲಕ ಕಾರಂತರ ಬದುಕು-ಬರಹಗಳ ಸಂದೇಶವನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವ ಪ್ರಯತ್ನ ಮಾಡಲಾಗುವುದು ಎಂದರು. ಖ್ಯಾತ ರಂಗವಲ್ಲಿ ತಜ್ಞೆ ಡಾ. ಭಾರತಿ ಮರವಂತೆ, ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯರಾದ ಡಾ.ಚೇತನ್ ಶೆಟ್ಟಿ ಕೋವಾಡಿ, ಸತೀಶ್ ಕೊಡವೂರು ಉಪಸ್ಥಿತರಿದ್ದರು.

    ಕಾರಂತ ಬಾಲ ಪ್ರಪಂಚ ಹಾಗೂ ವಿಜ್ಞಾನ ಪ್ರಪಂಚ ಕೃತಿಯ ಚಿತ್ರಗಳ  ಆಧಾರದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಂಗೋಲಿ ಬಿಡಿಸುವ  ಸ್ಪರ್ಧೆಯು ನಡೆಯಿತು.

    ಸ್ಪರ್ಧೆಗಳ ವಿಜೇತರು:
    ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ -ಪ್ರಥಮ – ಆತ್ಮಿಕಾ, ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ,  ದ್ವಿತೀಯ-ಪಾವನಿ ಜಿ ರಾವ್, ಶ್ರೀ ಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆ ಪಣಿಯಾಡಿ ಉಡುಪಿ, ತೃತೀಯ-ಅಕ್ಷರ ಎ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು, ಸಮಾಧಾನಕರ ಬಹುಮಾನ- ದೇವಿ ದರ್ಶನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರಿಯಾರ, ವಿಹಾನಿ ಎ ಶೆಟ್ಟಿಗಾರ್, ಹೆಚ್.ಎಂ.ಎಂ. ಇಂಗ್ಲೀಷ್ ಮೀಡಿಯಾಂ ಸ್ಕೂಲ್, ಕುಂದಾಪುರ, ಶಾಶ್ವಿತಾ ಆರ್ ಪೂಜಾರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರಿಯಾರ.

    Click here

    Click here

    Click here

    Call us

    Call us

    ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ- ಪ್ರಥಮ- ಕನಿಷ್ಕ, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ, ದ್ವಿತೀಯ- ಪವಿತ್ರಾ ಎ.ಶೇಟ್, ವಿ.ಕೆ.ಆರ್ ಸ್ಕೂಲ್ ಕುಂದಾಪುರ, ತೃತೀಯ- ಅವನಿ ಎ.ಶೆಟ್ಟಿಗಾರ್ ವಿ.ಕೆ.ಆರ್ ಸ್ಕೂಲ್ ಕುಂದಾಪುರ. ವಿಜೇತರಿಗೆ ಡಾ.ಶಿವರಾಮ ಕಾರಂತರ ಜನ್ಮ ದಿನದ ಅಂಗವಾಗಿ ಅಕ್ಟೋಬರ್ 09 ರಂದು ಬೆಳಿಗ್ಗೆ 10 ಗಂಟೆಗೆ  ಬ್ರಹ್ಮಗಿರಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

    05/10/2026

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

    05/10/2026

    ಕ್ಲೋಕೇಟ್‌ ಟೆಕ್ನಾಲಜೀಸ್ ನೂತನ ಕಚೇರಿಯ ಉದ್ಘಾಟನೆ

    05/10/2026
    Leave A Reply Cancel Reply

    19 − five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
    • ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಉದ್ಘಾಟನೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ
    • ಕ್ಲೋಕೇಟ್‌ ಟೆಕ್ನಾಲಜೀಸ್ ನೂತನ ಕಚೇರಿಯ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.