ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ”ಸೈಬರ್ ಅಪರಾಧ” ದ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.
ಕ್ರೈಂ ಡಿಪಾರ್ಟ್ಮೆಂಟ್, ಉಡುಪಿ ಇಲ್ಲಿಯ ಪವನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ನೆರವೇರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಸಂದೇಹಗಳನ್ನು ಪ್ರಶ್ನೆ ಕೇಳುವ ಮೂಲಕ ಪರಿಹರಿಸಿಕೊಂಡರು. ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿ, ಶಿಕ್ಷಕಿ ಶುಭ್ರತಾ ಅವರು ನಿರೂಪಿಸಿ, ಶಿಕ್ಷಕಿ ರಕ್ಷಿತಾ ಧನ್ಯವಾದ ಸಮರ್ಪಣೆಗೈದರು.
















