ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಚನ್ನಪಟ್ಟಣ ಇದರ ವತಿಯಿಂದ ಚನ್ನಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ತಂಡವು 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಹಾಗೂ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ ಗಂಗೂಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಆರ್ಯನ್ ವಿ.ಕೆ. ಮತ್ತು ಆರ್ಯನ್ ಎಸ್. ಅವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.











