Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ
    alvas nudisiri

    ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ವೈದ್ಯಕೀಯ ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ತಮ್ಮನ್ನು ತಾವು ಉನ್ನತ ಮಟ್ಟಕ್ಕೆ ಬೆಳೆಸಿಕೊಳ್ಳುವ ಗುರಿ ಹೊಂದಬೇಕು. ಭವಿಷ್ಯದ ವೈದ್ಯರಾಗಿ ತಮ್ಮದೇ ಆದ ಉನ್ನತ ಮಾನದಂಡಗಳನ್ನು ರೂಪಿಸಿಕೊಂಡು ಶ್ರೇಷ್ಠತೆಯತ್ತ ಸಾಗಬೇಕು ಎಂದು ಮೂಡಿಗೆರೆ ಹೊಯ್ಸಳ ಹೆಲ್ತ್ ಕೇರ್‌ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಅರ್ಪಿತಾ ಪ್ರತಾಪ್ ಸಿಂಹ ಹೇಳಿದರು.

    Click Here

    Call us

    Click Here

    ಅವರು ಮಿಜಾರು ಆವರಣದಲ್ಲಿರುವ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 24ನೇ ಪದವಿ ಹಾಗೂ 13ನೇ ಸ್ನಾತಕೋತ್ತರ ಪದವಿ ಬ್ಯಾಚ್‌ಗಳ ಶೈಕ್ಷಣಿಕ ಪಯಣಕ್ಕೆ ಸೋಮವಾರ ಚಾಲನೆ ನೀಡಿದ ‘ಆರಂಭಂ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ವಿದ್ಯಾರ್ಥಿ ಜೀವನದಲ್ಲಿ ಎಲ್ಲವೂ ನಮ್ಮ ನಿರೀಕ್ಷೆಯಂತೆ ನಡೆಯುತ್ತದೆ ಎಂಬುದಿಲ್ಲ. ಅನಿರೀಕ್ಷಿತ ಸವಾಲುಗಳು, ಸೋಲುಗಳು ಹಾಗೂ ಕಠಿಣ ಸಂದರ್ಭಗಳು ಎದುರಾಗಬಹುದು. ಅಂತಹ ಸಂದರ್ಭದಲ್ಲಿ ಎದೆಗುಂದದೆ, ಸೋಲಿನಿಂದ ಪಾಠ ಕಲಿತು ಮುನ್ನಡೆಯುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಯಶಸ್ಸಿನಷ್ಟೇ ವೈಫಲ್ಯವೂ ಬದುಕಿನಲ್ಲಿ ಮಹತ್ವದ ಪಾಠಗಳನ್ನು ಕಲಿಸುತ್ತದೆ.  ವೈದ್ಯಕೀಯ ವೃತ್ತಿಯಲ್ಲಿ ಜ್ಞಾನ ಮತ್ತು ಕೌಶಲ್ಯದಷ್ಟೇ ರೋಗಿಗಳೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಸಾಮರ್ಥ್ಯವೂ ಮುಖ್ಯ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿಯೇ ಸ್ಥಳೀಯ ಭಾಷೆಯನ್ನು ಕಲಿಯಲು ಆದ್ಯತೆ ನೀಡಬೇಕು. ರೋಗಿಯ ಮಾತೃಭಾಷೆಯಲ್ಲಿ ಅವರೊಂದಿಗೆ ಮಾತನಾಡಲು ಸಾಧ್ಯವಾದಾಗ ವೈದ್ಯರ ಮೇಲಿನ ವಿಶ್ವಾಸ ಹೆಚ್ಚುತ್ತದೆ ಹಾಗೂ ವೈದ್ಯ–ರೋಗಿ ಸಂಬಂಧ ಮತ್ತಷ್ಟು ಬಲಗೊಳ್ಳುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ಹೊಸ ಅವಕಾಶಗಳನ್ನು ಸ್ವೀಕರಿಸುವ ಮತ್ತು ಅಗತ್ಯವಿದ್ದಾಗ ಅಪಾಯಗಳನ್ನು ಎದುರಿಸುವ ಧೈರ್ಯವೂ ಅಗತ್ಯ. ವಿದ್ಯಾರ್ಥಿಗಳು ಪಠ್ಯಕ್ರಮಕ್ಕೆ ಸೀಮಿತವಾಗದೆ ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಬೇಕು. ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸುವ ಮೂಲಕ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಶೈಕ್ಷಣಿಕ ಛಾಪು ಮೂಡಿಸಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ವಿಕಾಸ್, ಸರ್ವಾಂಗಾಸನ ಭಂಗಿಯಲ್ಲಿ ದೀರ್ಘಕಾಲ ಇದ್ದ ಸಾಧನೆಗಾಗಿ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನ ಮಾನ್ಯತೆ ಪಡೆದಿರುವುದನ್ನು ವಿಶೇಷವಾಗಿ ಗುರುತಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಉಪಪ್ರಾಂಶುಪಾಲೆ ಡಾ. ವಿದ್ಯಾರಾಣಿ ಉಪಸ್ಥಿತರಿದ್ದರು. ಯೋಗೇಶ್ವರನ್ ಎಂ. ಕರ‍್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಡಾ. ರಶ್ಮಿತಾ ಆಳ್ವ  ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    06/10/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    06/10/2026

    ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

    05/10/2026
    Leave A Reply Cancel Reply

    2 × three =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ
    • ನಾಪತ್ತೆಯಾಗಿದ್ದ ಯುವಕ‌ ಶವವಾಗಿ ತೋಟದಲ್ಲಿ ಪತ್ತೆ
    • ಹಂಗಾರಕಟ್ಟೆ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮ
    • ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ
    • ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.