ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ ಜ್ಞಾನ ವಿಜ್ಞಾನ ಸಮಿತಿಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನಿಂದ ಆಗಮಿಸಿದ್ದ ವನ್ಯಜೀವಿ ತಜ್ಞರಾದ ಡಾ.ಅಶ್ವಥ್, ಲೇಖಕಿ ಹೂರ್ ಬಾನು, ಪರಿಸರಾಸಕ್ತ ಸಾಫ್ಟ್ ವೇರ್ ಇಂಜಿನಿಯರ್ ಆನಂದ್ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣೆಗೆ ಮಾರ್ಗದರ್ಶನ ಮಾಡಿದರು.
ವಂಡ್ಸೆ ಸಮೀಪದ ಆತ್ರಾಡಿ ಭಾಗದ ನದಿ ತೀರ ಮತ್ತು ಕಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು 40ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳನ್ನು ಗುರುತಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಆ ಹಕ್ಕಿಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡರು.
ಬಿಜಿವಿಎಸ್‌ನ ಬೈಂದೂರು ಘಟಕದ ಕಾರ್ಯದರ್ಶಿ ಡಾ. ಪೂರ್ಣಿಮಾ ಈ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಬಿಜಿವಿಎಸ್ ರಾಜ್ಯ ಘಟಕದ ಸದಸ್ಯರಾದ ಉದಯ ಗಾಂವ್ಕರ್, ಸಂಧ್ಯಾ, ವಂಡ್ಸೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಸತೀಶ್ ಮೊಗವೀರ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮತ್ತು ಶಾಲಾ ಶಿಕ್ಷಕರು ಈ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.
















