ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ಜಿಲ್ಲೆ, ಇವರ ಆಶ್ರಯದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರದ ರಾಪಿಡ್ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸಾಗರಿ ಆರ್ ಪೂಜಾರಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.











