ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಯಾವುದೇ ಕೆಲಸ ಮಾಡುವಾಗ ನಮ್ಮಲ್ಲಿ ಆತ್ಮವಿಶ್ವಾಸ ಇರಬೇಕು. ಮೊದಲು ನಮ್ಮಲ್ಲಿ ನಾವು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಶಿಶು ಮಂದಿರಗಳಲ್ಲಿ ಶಿಬಿರಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಹಿಂದುಪರ ಸಂಘಟನೆಯ ಮುಖಂಡ ಶ್ರೀಧರ ನಾಯ್ಕ್ ಹೇಳಿದರು.
ಅವರು ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮಮತಾ ಜಿ.ಪೈ, ಸವಿತಾ ಆಚಾರ್ಯ, ಶಿಶು ಮಂದಿರದ ಸದಸ್ಯೆ ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಿ. ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿ, ವಂದಿಸಿದರು.











