ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದ ಪ್ರದಾನ ಸ್ವೀಕಾರ ಸಮಾರಂಭವು ಅ.11ರ ಭಾನುವಾರ ಬೆಳಗ್ಗೆ 9.30ಕ್ಕೆ ಬೈಂದೂರಿನ ಯಡ್ತರೆಯ ಜೆಎನ್‌ಆರ್ ಕಲಾ ಮಂದಿರದಲ್ಲಿ ಜರುಗಲಿದೆ.
ಉಡುಪಿ ಜಿಲ್ಲೆಯ ಕೋಟೆಗಾರ ಮತ್ತು ರಾಮಕ್ಷತ್ರಿಯ ಸಮಾಜದ ಸದಸ್ಯರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಒಂದು ಉಪಕ್ರಮವಾಗಿ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟವನ್ನು ರಚಿಸಲಾಗುತ್ತಿದೆ. ಬಲಿಷ್ಠ, ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿರುವ ಈ ಒಕ್ಕೂಟವು, ಸಮಾಜದ ಒಳಿತಿಗಾಗಿ ಸಮುದಾಯದ ಎಲ್ಲಾ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ.

ಕಾರ್ಯಕ್ರಮವನ್ನು ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೋಟೆಗಾರ ಸಂಘದ ಅಧ್ಯಕ್ಷ ನಾಡೋಜ ಡಾ. ಕೊಡ್ಲು ಕೃಷ್ಣಪ್ರಸಾದ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಮಕ್ಷತ್ರಿಯ ಒಕ್ಕೂಟದ ಚುನಾಯಿತ ಅಧ್ಯಕ್ಷ ಕೊತ್ವಾಲ್ ಪದ್ಮನಾಭ ಶೇರುಗಾರ್ ಗಂಗೊಳ್ಳಿ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಶಶಿಧರ್ ನಾಯ್ಕ್, ಉತ್ತರ ಕನ್ನಡ ರಾಮಕ್ಷತ್ರಿಯ ಸಂಸ್ಥೆಗಳ ಸೀಮಾ ಪರಿಷತ್ ಅಧ್ಯಕ್ಷ ಎಸ್. ಕೆ. ನಾಯ್ಕ್, ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಕಾರ್ಯಾಧ್ಯಕ್ಷ ಹೆಬ್ರಿ ಶ್ರೀನಿವಾಸ ಸೇರ್ವೆಗಾರ್, ನಿವೃತ್ತ ಲೆಪ್ಟಿನೆಂಟ್ ಕರ್ನಲ್ ನರಸಿಂಹ ನಾಯಕ್, ಹೊನ್ನಾವರ ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಅಣ್ಣಪ್ಪ ನಾಯಕ್, ಬೆಂಗಳೂರು ರಾಮಕ್ಷತ್ರಿಯ ಯುವ ಸೇವಾ ಸಂಘದ ಅಧ್ಯಕ್ಷ ಗಣೇಶ್ ಉಪಸ್ಥಿತರಿರಲಿದ್ದಾರೆ. ಹೊಸನಗರ ಕೋಟೆಗಾರ್ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಎಚ್. ಆರ್. ದಿಕ್ಕೂಚಿ ಭಾಷಣ ಮಾಡಲಿದ್ದಾರೆ.
ಅಂದು ಬೆಳಿಗ್ಗೆ ಬೈಂದೂರು ರಾಮ ಕ್ಷತ್ರಿಯ ಸಂಘದ ಅಧ್ಯಕ್ಷ ಗುರುದತ್ತ ಹೆಬ್ಬಾಗಿಲು ಭಜನಾ ಮಾಧುರ್ಯಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ 9:30ಕ್ಕೆ ದೀಪ ಪ್ರಜ್ವಲನೆ ಮತ್ತು ಶಾಲೆಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವಾರ್ಪಣೆ. ಗುರುತಿಸುವಿಕೆ. ಪ್ರತಿಭಾವಂತರಿಗೆ ವಿದ್ಯಾರ್ಥಿವೇತನ ವಿತರಣೆ. ನಂತರ ಉಡುಪಿ ಜಿಲ್ಲೆಯ ರಾಮಕ್ಷತ್ರಿಯ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎ.ಕೆ.ಕೆ.ಎಸ್ ಅಧ್ಯಕ್ಷ ಡಾ. ಕೂಡ್ಲು ಕೃಷ್ಣಪ್ರಸಾದ್, ಪ್ರದಾನ ಕಾರ್ಯದರ್ಶಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ, ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಕೊತ್ವಾಲ್ ಪದ್ಮನಾಭ ಶೇರುಗಾರ್ ಗಂಗೊಳ್ಳಿ , ಪ್ರಧಾನ ಕಾರ್ಯದರ್ಶಿ ಗಣಪತಿ ಹೊಬಳಿದಾರ್ ಕೋರಿದ್ದಾರೆ.
















