ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ ಹಾಗೂ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇವರ ಸಹಯೋಗದಲ್ಲಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಾದ ತನೀಶ್ ಜೆ. ಪೂಜಾರಿ 7E ಹಾಗೂ ಅಭಿನವ್ ಎ ಪೈ 7 C ಇವರು ದ್ವಿತೀಯ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.











