ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ರಜೆಯಲ್ಲಿ ಊರಿಗೆ ಬಂದಿರುವ ಯುವತಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಘಟನೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಕೆ. ಆಯಿಶಾ ಶವಾನಾ (23) ನಾಪತ್ತೆಯಾದ ಯುವತಿ.
ಬೆಂಗಳೂರಿನಲ್ಲಿ ಮೊಬೈಲ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 15 ದಿನಗಳ ಹಿಂದೆ ಮನೆಗೆ ಬಂದಿದ್ದು ಮನೆಯವರು ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ಮದುವೆಯಾಗಲು ನಿರಾಕರಿಸಿದ್ದರೆನ್ನಲಾಗಿದೆ. ಅ. 5ರಂದು ಬೆಳಗ್ಗೆ 4.30ರ ಸುಮಾರಿಗೆ ಮನೆಯಿಂದ ಕಾಣೆಯಾಗಿದ್ದು ಎಲ್ಲೂ ಪತ್ತೆಯಾಗಿಲ್ಲ ಎಂದು ಮನೆಯವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.











