ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದುಟಾಗುವ ದುಷ್ಪರಿಣಾಮಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಉಡುಪಿ ಕ್ರೈಂ ಡಿಪಾರ್ಟ್ಮೆಂಟ್ನ ನಿಲೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು.
ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.











