ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಸಾರ್ವಜನಿಕ ಹಾಗೂ ರಾಜಕೀಯ ಸೇವಾ ಪಯಣದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ನಡೂರು ಗ್ರೀನ್ ಪ್ಯಾಲೇಸ್ ಸಭಾಂಗಣದಲ್ಲಿ “ನಡೂರು ಮತ್ತು ಕಾಡೂರು ಶಕ್ತಿ ಕೇಂದ್ರ ವ್ಯಾಪ್ತಿಯ ಅಂಗನವಾಡಿ ಉತ್ಸವ” ಅರ್ಥಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಸಂಘದ ಸಾಮಾನ್ಯ ಪ್ರಚಾರಕನಿಂದ ಹಿಡಿದು ಗುಜರಾತ್ ಮುಖ್ಯಮಂತ್ರಿಯಾಗಿ, ಇದೀಗ ದೇಶದ ಪ್ರಧಾನಿಯಾಗಿ ಮೋದಿಜಿ ಅವರು ಸಲ್ಲಿಸಿರುವ 25 ವರ್ಷಗಳ ನಿಷ್ಕಳಂಕ ಸೇವೆ ಇಡೀ ಜಗತ್ತಿಗೆ ಮಾದರಿ. ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿ ರಾಜಕಾರಣ ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಅಂತ್ಯೋದಯದ ಮಂತ್ರದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದೇ ಈ ಅಭಿಯಾನದ ಮುಖ್ಯ ಉದ್ದೇಶ” ಎಂದರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ “ಸಮಾಜದ ಕಟ್ಟಕಡೆಯ ಮಗುವಿನ ಶಿಕ್ಷಣ, ಪೋಷಣೆಗಾಗಿ ಹಗಲಿರುಳು ಶ್ರಮಿಸುವ ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತರ ಸೇವೆ ನಿಜಕ್ಕೂ ಅಭಿನಂದನಾರ್ಹ. ನಿಮ್ಮ ಸೇವೆಯಿಂದಲೇ ವಿಕಸಿತ ಭಾರತದ ಬುನಾದಿ ಗಟ್ಟಿಯಾಗುತ್ತಿದೆ” ಎಂದು ಹಾರೈಸಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸೇವಾ ಸಂಕಲ್ಪ ಅಭಿಯಾನದ ಮಹತ್ವವನ್ನು ವಿವರಿಸಿದರು. ಇದೇ ವೇಳೆ ನಡೂರು-ಕಾಡೂರು ಭಾಗದ ವಿವಿಧ ಅಂಗನವಾಡಿ ಶಿಕ್ಷಕಿಯರು, ಸಹ ಶಿಕ್ಷಕಿಯರು ಮತ್ತು ಆಶಾ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಲಾಯಿತು.
ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, “ಮೋದಿಜಿ ಅವರ 25 ವರ್ಷಗಳ ಸೇವಾ ಮಾದರಿಯನ್ನು ಮುಂದಿಟ್ಟುಕೊಂಡು ಪಕ್ಷವು ಸೇವೆಯೊಂದಿಗೆ ಸಂಘಟನೆಯನ್ನು ಬಲಪಡಿಸುವ ಕಾರ್ಯ ಮಾಡುತ್ತಿದೆ” ಎಂದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಶೆಟ್ಟಿ, ಮಹಿಳಾ ಮೋರ್ಚಾ ಪ್ರಭಾರಿ ರೂಪಾ ಬಾಬು ಪೈ, ಕುಂದಾಪುರ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲಿಯಾನ್, ಅಭಿಯಾನದ ಸಹ ಸಂಚಾಲಕರಾದ ಕಿರಣ್ ಪೂಜಾರಿ ತೆಕ್ಕಟ್ಟೆ, ಸುರೇಂದ್ರ ಕಾಂಚನ್ ಸಂಗಮ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ,, ಕುಂದಾಪುರ ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಶೆಟ್ಟಿ ಶಿರೂರು,, ನೇತ್ರಾವತಿ ಮಡಿವಾಳ, ಜಿಲ್ಲಾ ಪಂ. ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯರಾದ ಅರುಣ್ ನಾಯಕ್, ಭುಜಂಗ ಶೆಟ್ಟಿ ಕಾಡೂರು, ಕಾಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಜಲಂಧರ್ ಶೆಟ್ಟಿ, ಪಾಂಡುರಂಗಶೆಟ್ಟಿ,, ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಜಿ., ಮಾಜಿ ಗ್ರಾಂ. ಪಂ. ಸದಸ್ಯರಾದ ಜಯರಾಮ ಶೆಟ್ಟಿ, ಸತ್ಯನಾರಾಯಣ ಶೆಟ್ಟಿ, ಪ್ರಕಾಶ್ ಶೆಟ್ಟಿ,, ಗಿರಿಜಾ, ಮಂಡಲ ಕಾರ್ಯಕಾರಿಣಿ ಸದಸ್ಯ ದೀಪ ಪ್ರವೀಣ್ ಶೆಟ್ಟಿ,,ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಚೇತನ ಪಿ., ಆಶಾ ಗೋವಿಂದ, ವಿಮಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಅಮಿತಾ ರಾಜೇಶ್ ಸ್ವಾಗತಿಸಿದರು. ಕಾಡೂರು ಗ್ರಾ.ಪಂ. ಮಾಜಿ ಸದಸ್ಯ ಗಿರೀಶ್ ರಾವ್ ನಿರೂಪಿಸಿದರು. ಸತೀಶ್ ಕುಲಾಲ್ ವಂದಿಸಿದರು.
















