ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ವಂಡ್ಸೆ ವಲಯದ ಆತ್ರಾಡಿ ಅಂಗನವಾಡಿ ಕೇಂದ್ರದಲ್ಲಿ ಫೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಅಂಗನವಾಡಿ ಮೇಲ್ವಿಚಾರಕಿ ಭಾಗ್ಯವತಿ ಉದ್ಘಾಟಿಸಿ, ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಲ್ಲಿ ಅಪೌಷ್ಠಕತೆ ನಿವಾರಣೆಗೆ ತಗೆದುಕೊಳ್ಳಬೇಕಾದ ಆಹಾರ ಪದ್ದತಿ ಸ್ಥಳೀಯವಾಗಿ ಸಿಗುವ ಸೊಪ್ಪು ತರಕಾರಿಗಳ ಬಳಕೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗರ್ಬಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಶ್ರುತಿ, ಎಂ.ಆರ್.ಡಬ್ಲ್ಯೂ ಜಾಕ್ಲಿನ್ ವೆನಿಶಾ ಡಿಮೆಲ್ಲೊ, ಎಲ್.ಸಿ.ಆರ್.ಪಿ ನಿರ್ಮಲ ವಂಡ್ಸೆ, ಆಶಾ ಕಾರ್ಯಕರ್ತೆ ವನಿತಾ ಹಾಗೂ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು ಉಪಸ್ಥಿತರಿದ್ದರು. ಜ್ಯೋತಿ ಹೊಲಾಡು ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಜಲಜ ವಂದಿಸಿದರು.











