ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮತ್ತು ಕಾಲೇಜಿನ ಮಾನವ ಹಕ್ಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಕ್ಟೋಬರ್ 10ರ ಪ್ರಯುಕ್ತ ಮಾನಸಿಕ ಅರೋಗ್ಯ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮನೋವೈದರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇದರ ವೈದ್ಯಾಧಿಕಾರಿ ಡಾ. ಶಶಾಂತ್ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮಹತದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡ , ಪರೀಕ್ಷಾ ಭಯ, ಭವಿಷ್ಯ ಚಿಂತೆ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸುವ ರೀತಿ ಮತ್ತು ಧನಾತ್ಮಕ ಚಿಂತನೆ ಸಮಯ ನಿರ್ವಹಣೆ, ಧ್ಯಾನ ವಿಶ್ರಾಂತಿ ಹಾಗೂ ವಿದ್ಯಾರ್ಥಿಗಳು ಭಾವನಾತ್ಮಕ ಸಮಸ್ಯೆಗಳನ್ನು ಎದುರಿಸುವಾಗ ಅವುಗಳನ್ನು ಮುಚ್ಚಿಡದೇ ಪೋಷಕರಿಗೆ, ಶಿಕ್ಷಕರಿಗೆ, ಆರೋಗ್ಯ ತಜ್ಞರೊಂದಿಗೆ ಮುಕ್ತವಾಗಿ ಚರ್ಚಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮೇಲ್ವಿಚಾರಣಾಧಿಕಾರಿಗಳಾದ ಹೆಚ್.. ನಾಯ್ಕರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಇಲ್ಲಿನ ಸೈಕಾಟ್ರಿಕ್ ಸೋಶಿಯಲ್ ವರ್ಕರ್‌ರಾದ ವಸಂತಿ ಆರ್. ನಾಯ್ಕ್, ಅರ್ಪಿತಾ ಬ್ರಹ್ಮಾವರ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ನಿರ್ವಹಿಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕಿ ಸುಬ್ಬಲಕ್ಷ್ಮೀ ಧನ್ಯವಾದ ಗೈದರು.
















