Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂವಿಧಾನದ ಬಗ್ಗೆ ಹಾಗೂ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಯುವ ಸಂಸತ್ತು ಸಭೆಯನ್ನು ಆಯೋಜಿಸಲಾಗುತ್ತಿದೆ. ಇದನ್ನು ವ್ಯವಸ್ಥಿತ ಹಾಗ ಅರ್ಥ ಪೂರ್ಣವಾಗಿ ಆಯೋಜಿಸಿ ಯಶಸ್ವಿಗೊಳಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಸೂಚನೆ ನೀಡಿದರು.

    Click Here

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ನಮ್ಮ ದೇಶದ ಸಂವಿಧಾನದ ಅನ್ವಯ ಸರಕಾರದ ಕಾರ್ಯಗಳು ನಡೆಯುತ್ತಿವೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳೇ ತಮ್ಮ ಪ್ರಭುಗಳನ್ನು ಆಯ್ಕೆ ಮಾಡಿ ಸರಕಾರ ನಡೆಸಲು ಅನುವು ಮಾಡಿಕೊಡಲಾಗಿದೆ. ಜನಸಾಮಾನ್ಯರ ಆಶೋತ್ತರಗಳನ್ನು ನೆರವೇರಿಸಲು ಸಂಸತ್ತಿನಲ್ಲಿ ಕಾರ್ಯ ಕಲಾಪಗಳು ಯಾವೆಲ್ಲಾ ರೀತಿಯಲ್ಲಿ ಚರ್ಚೆ ನಡೆದು ಅನುಷ್ಠಾನಗೊಳಿಸಲಾಗುತ್ತದೆ ಎಂಬುದರ ಬಗ್ಗೆ ಯುವ ಸಮುದಾಯಕ್ಕೆ ಪರಿಚಯ ಮಾಡಿಕೊಡುವ ಉದ್ದೇಶದಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದರು.

    ಪ್ರತೀ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಸಭೆ ನಡೆಯಲಿದ್ದು, ತಾಲೂಕಿನಲ್ಲಿ ಆಯ್ದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಯುವಸಂಸತ್ತು ಸಭೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಈ ಸಭೆಯಲ್ಲಿ ಅತ್ಯುತ್ತಮವಾಗಿ ಚರ್ಚೆಯಲ್ಲಿ ಪಾಲ್ಗೊಂಡ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ನವೆಂಬರ್ 3 ರ ಒಳಗೆ ರಾಜ್ಯ ಮಟ್ಟದ ಯುವ ಸಂಸತ್ತು ಸಭೆಗೆ ಕಳುಹಿಸಿಕೊಡಬೇಕು ಎಂದರು.

    ಯುವ ಸಂಸತ್ತು ಸಭೆಗಳನ್ನು ಜಿಲ್ಲಾ ವಕೀಲರ ಸಂಘದ ಸಮನ್ವಯದೊಂದಿಗೆ ಆಯೋಜಿಸಬೇಕು. ಜಿಲ್ಲಾ ಮಟ್ಟದ ಯುವಸಂಸತ್ತು ಸಭೆಗೆ ದಿನವನ್ನು ನಿಗಧಿಪಡಿಸಿ, ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ, ಸಭೆಯಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ಮೊದಲೇ ವಿದ್ಯಾರ್ಥಿಗಳಿಗೆ ತಿಳಿಸಿರಬೇಕು. ರಾಜ್ಯ ವಿಧಾನಸಭೆಯ ಮಾದರಿಯಲ್ಲಿ ವಿದ್ಯಾರ್ಥಿಗಳನ್ನೊಳಗೊಂಡ ಯುವ ಸಂಸತ್ತು ಸಭೆಯನ್ನು ಆಯೋಜಿಸಬೇಕು ಎಂದರು.

    Click here

    Click here

    Click here

    Call us

    Call us

    ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಬೆಳಗ್ಗೆ 10 ಗಂಟೆಗೆ ನಾಡಗೀತೆಯೊಂದಿಗೆ ಅಧಿವೇಶನವನ್ನು ಆರಂಭಿಸಬೇಕು. ಪೀಠಿಕೆ ವಾಚನ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆ, ತುರ್ತು ವಿಷಯದ ಮೇಲಿನ ಚರ್ಚೆ, ವಿಧೇಯಕಗಳ ಮಂಡನೆ, ವಿಧೇಯಕಗಳ ಮೇಲಿನ ಚರ್ಚೆ, ಅವುಗಳ ಅಂಗೀಕಾರ, ಸಭೆಯ ಅನಿರ್ಧಷ್ಟ ಅವಧಿಗೆ ಮುಂದೂಡಿಕೆ, ರಾಷ್ಟçಗೀತೆ ಪ್ರಸಾರವನ್ನು ಒಳಗೊಂಡಿರುವAತೆ ನೋಡಿಕೊಳ್ಳಬೇಕು ಎಂದರು.

    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರೇನಾಲ್ಡ್ ಪ್ರವೀಣ್ ಕುಮಾರ್, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.13ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    10/10/2026

    ರೈತರುಗಳಿಗೆ ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆಗೆ ಅರ್ಜಿ ಆಹ್ವಾನ

    09/10/2026

    ರಾಜ್ಯ ಜಿ.ಪಿ.ಟಿ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಶಾಖೆಗೆ ಚುನಾವಣೆ. ಅಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಆಯ್ಕೆ

    08/10/2026
    Leave A Reply Cancel Reply

    twenty − 9 =

    Call us

    Click Here

    Call us

    Call us

    Call us
    Highest Viewed Recently
    • ಪಿಎಂ ಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ
    • ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ 17 ಪದಕದೊಂದಿಗೆ 02 ನೂತನ ಕೂಟ ದಾಖಲೆ  
    • ಅ.13ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
    • ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಮಾನಸಿಕ ಆರೋಗ್ಯ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.