ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಾಲ ಕಳೆಯುವ ಮೊದಲು ನಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಕೃತಿ ಮತ್ತು ಜನರನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅವರು ಅಭಿಪ್ರಾಯಪಟ್ಟರು.
ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೈಂದೂರು ವಲಯದ ಶಿರೂರಿನ ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ದಿಕ್ಸೂಚಿ ಭಾಷಣದಲ್ಲಿ ಅಭಿಪ್ರಾಯಪಟ್ಟರು.
ಮೂಕಾಂಬಿಕ ಕಾಪರ್ ಇಂಡಸ್ಟ್ರೀಸ್ ಕೊಡಪಾಡಿಯ ಮಾಲೀಕರಾದ ಉಮೇಶ್ ಎಲ್ ಮೇಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎನ್ಎಸ್ಎಸ್ ಶಿಬಿರಗಳು ಬದುಕನ್ನು ಅರ್ಥ ಮಾಡಿಕೊಳ್ಳಲು ಕಲಿಸುತ್ತದೆ. ಕಷ್ಟಗಳನ್ನು ಎದುರಿಸುವಲ್ಲಿನ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್ ಪಿ.ಎಂ.ಶ್ರೀ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೃಷ್ಣ ಬಿ. ಪೂಜಾರಿ ಪಿ.ಎಂ.ಶ್ರೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಆರ್. ಶೆಟ್ಟಿ, ಎಸ್‌ಡಿಸಿ ಅಧ್ಯಕ್ಷ ಚಿಕ್ಕು ಪೂಜಾರಿ, ಕಾರ್ಯದರ್ಶಿ ಪ್ರಸಾದ್ ಪ್ರಭು ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಭಾಸ್ಕರ್ ಹೆಚ್ ಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ. ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಾರ್ಥನಾ ಮತ್ತು ಅಂಕಿತಾ ಅತಿಥಿಗಳನ್ನು ಪರಿಚಯಿಸಿದರು. ಅದಿತಿ ಪ್ರಾರ್ಥಿಸಿದರು. ಸಾನಿಕ ಸ್ವಾಗತಿಸಿ, ದೀಪಾಲಿ ಕಾರ್ಯಕ್ರಮವನ್ನು ನಿರೂಪಿಸಿ, ವೈಷ್ಣವಿ ವಂದಿಸಿದರು.
















