ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಬಿದ್ಕಲ್‌ಕಟ್ಟೆಯಲ್ಲಿ ಉದ್ಘಾಟನೆಗೊಂಡಿತು
ಶಿಬಿರದ ಉದ್ಘಾಟನೆಯನ್ನು ಬಿದ್ಕಲ್‌ಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಮಾತನಾಡಿ, ಇಂತಹ ಶಿಬಿರದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ. ವಿಧ್ಯಾರ್ಥಿಗಳು ಸೇವೆ ಮಾಡುವುದರ ಮೂಲಕ ತಮ್ಮ ಬದುಕನ್ನು ಸಾರ್ಥಕ ಗೊಳಿಸಬೇಕೆಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ತಗ್ಗರ್ಸೆ ಅವರು ವಹಿಸಿ, ಮಾತನಾಡಿ, ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಸಹಬಾಳ್ವೆ ಮತ್ತು ನಾಯಕತ್ವದಂತಹ ಒಳ್ಳೆಯ ಮೌಲ್ಯಗಳು ಬೆಳೆಯುತ್ತದೆ ಸಮಾಜಮುಖಿ ಕೆಲಸದೊಂದಿಗೆ ದೇಶ ಸೇವೆ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ದೇವಲ್ ಬೆಟ್ಟು, ಬಿದ್ಕಲ್‌ಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ನ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಗೌತಮ್ ಶೆಟ್ಟಿ, ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ಕ್‌ನ ಪ್ರಾಂಶುಪಾಲ ಗುಣರತ್ನ, ಉಪ ಪ್ರಾಂಶುಪಾಲರಾದ ಉಷಾ, ಎನ್.ಎಸ್.ಎಸ್. ಘಟಕದ ನಾಯಕರುಗಳಾದ ರಂಜನ್ ಹಾಗೂ ರಶ್ಮಿತಾ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ಯೋಜನಾಧಿಕಾರಿ ಜ್ಯೋತಿ ಎ. ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ ಬಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಉಪನ್ಯಾಸಕ ನಾಗರಾಜ ಅಡಿಗ ಕಾರ್ಯಕ್ರಮ ನಿರೂಪಿಸಿ, ಶಿಬಿರಾರ್ಥಿ ನವ್ಯಶ್ರೀ ವಂದಿಸಿದರು.
















