ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಪೊಲೀಸ್ ಠಾಣೆಗಳ ಪೈಕಿ ಗಂಗೊಳ್ಳಿ ಪೊಲೀಸ್ ಠಾಣೆಯು 7ನೇ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕ ರಾಜ್ಯ ಪೊಲೀಸ್ ನಡೆಸಿರುವ ಈ ಆಂತರಿಕ ಸರ್ವೆಯಲ್ಲಿ ವಿವಿಧ ಮಾನದಂಡಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗಿದೆ. ಅಪಘಾತಕ್ಕೆ ಕಡಿವಾಣ, ಸಾರ್ವಜನಿಕರೊಂದಿಗೆ ಉತ್ತಮ ಸ್ಪಂದನೆ, ದಾಖಲೆಗಳ ನಿರ್ವಹಣೆ ಮತ್ತು ತ್ವರಿತ ದೂರು ವಿಲೇವಾರಿ ಮೊದಲಾದ ಅಂಶಗಳನ್ನು ಪರಿಗಣಿಸಲಾಗಿದೆ.











