ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರ ಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿಗಳಾದ ನಂದನ್ ಆರ್., ರಾಹುಲ್ ಜಿ.ಎನ್., ರಿಷಿ ಎಸ್. ಶೆಟ್ಟಿ, ಸುಮಿತ್ ಎಸ್. ಪ್ರಭು, ಚಿಂತನ್ ಎಮ್. ಹೆಗ್ಡೆ , ಪ್ರಣಮ್ ಹೆಚ್.ಡಿ., ಮಿಹಿರ್ ಹೆಗ್ಡೆ, ಯು. ಶ್ರೀಶ ಮೈಪಾಡಿ, ಯಶಸ್ ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ರಾಷ್ಟ್ರ ವ್ಯಾಪಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟಾರೆ 7406 ಮಂದಿ ವಿದ್ಯಾರ್ಥಿಗಳು ತೇರ್ಗಡೆಯನ್ನು ಹೊಂದಿದ್ದು ಅದರಲ್ಲಿ 9 ಮಂದಿ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯಿಂದ ಆಯ್ಕೆಗೊಂಡಿರುವುದು ಅತೀವ ಸಂತೋಷವನ್ನುಂಟು ಮಾಡಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
















