ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅ.11ರ ಭಾನುವಾರದಿಂದ 21ರ ಬುಧವಾರ (ವಿಜಯದಶಮಿ) ವರೆಗೆ ಜರಗಲಿದ್ದು ಭಾನುವಾರ ಬಾಲಕೃಷ್ಣ ಶೆಟ್ಟಿ ಕುಟುಂಬಸ್ಥರಿಂದ ದುರ್ಗಾಹೋಮ, ವಿಶೇಷ ಮಹಾಪೂಜಾ ಕಾರ್ಯಕ್ರಮಗಳು ಜರಗಿತು.
ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು.
ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸೇವಾರ್ತಿಗಳಿಗೆ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ಶಿವ ಪೂಜಾರಿ,ಸುಭಾಷ್ ಶೆಟ್ಟಿ,ಗಣೇಶ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಡಿ. ಕಾಂಚನ್, ಚಂದ್ರಶೇಖರ್ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಚಂದ್ರ ಪೂಜಾರಿ, ಕೋಟ ಪಂಚಾಯತ್ ಮಾಜಿ ಸದಸ್ಯ ಭುಜಂಗ ಗುರಿಕಾರ, ದೇಗುಲದ ಅರ್ಚಕರಾದ ಸಂದೇಶ್ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳು ಜರುಗಿದವು.

















