ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಂತಹ ಶಿಬಿರಗಳು ಸಹಕಾರಿಯಾಗುವುದು. ಎಂದು ಪ್ರದೀಪ್ ಕುಮಾರ್ ಶೆಟ್ಟಿ ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಆರ್.ಸಿ. ಬೈಂದೂರು ಅಭಿಪ್ರಾಯಪಟ್ಟರು.
ಅವರು ಶಿರೂರು ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಭಾಷಣದಲ್ಲಿ ಮಾತನಾಡಿದರು.
ಮುಖ್ಯ ಅತಿಥಿ ಮಂಗೇಶ್ ವಿ. ಶಾನುಭಾಗ್ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡಾಗ ಬದುಕಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂಬುದಾಗಿ ತಿಳಿಸಿದರು.
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಜಯ್ ನಾಯ್ಕ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು, ರಾಜೇಶ್ ಕುಮಾರ್ ಶಿಕ್ಷಣ ಸಂಯೋಜಕರು ಬೈಂದೂರು, ಪಿಎಂಶ್ರೀ ಕೆಪಿಎಸ್ ನ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಕಾರ್ಯದರ್ಶಿ ಸದಾಶಿವ ನಾಯಕ್, ಎಸ್.ಡಿ.ಸಿ ಕಾರ್ಯದರ್ಶಿಯಾಗಿರುವ ಪ್ರಸಾದ್ ಪ್ರಭು ಪಿಎಂಶ್ರೀ ಕೆಪಿಎಸ್ ನ ಮುಖ್ಯ ಶಿಕ್ಷಕರಾದ ಶಂಕರ್ ಶಿರೂರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಪರವಾಗಿ ಮುಖ್ಯ ಶಿಕ್ಷಕರಾದ ಶಂಕರ್ ಶಿರೂರು ಎಸ್‌ಡಿಎಂಸಿ ಅಧ್ಯಕ್ಷರಾದ ಕೃಷ್ಣ ಪೂಜಾರಿ ಹಾಗೂ ಶಾಲೆಯ ಆಯಾ ಗೀತಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ಪಿಎಂಶ್ರೀ ಕೆಪಿಎಸ್ ಶಿರೂರು ಸಂಸ್ಥೆ ಪರವಾಗಿ ಯೋಜನಾಧಿಕಾರಿ ಸುಗುಣ ಆರ್ ಕೆ ಅವರನ್ನು ಗೌರವಿಸಲಾಯಿತು.
ಪ್ರಜ್ಞಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕ ಪ್ರಾರ್ಥಿಸಿದರು. ದೀಪಾಲಿ ಅತಿಥಿಗಳನ್ನು ಸ್ವಾಗತಿಸಿದರು. ಅದಿತಿ ನಿರೂಪಿಸಿ, ಕಾರ್ಯಕ್ರಮ ಅಧಿಕಾರಿ ಸುಗುಣ ಆರ್.ಕೆ. ವಂದಿಸಿದರು. ಪ್ರಾರ್ಥನಾ ಪೈ ದೀಪಾಲಿ ವರದ ಶಿಬಿರದ ಅನುಭವಗಳನ್ನು ಹಂಚಿಕೊಂಡರು.

















