Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ
    ಊರ್ಮನೆ ಸಮಾಚಾರ

    ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ  ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ. ಬಾಲಕೃಷ್ಣ ಹೇಳಿದರು.

    Click Here

    Click Here

    Call us

    Click Here

    ಅವರು ಮಂಗಳವಾರ ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗೀತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರು ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವರ್ಷಗಳು ಕಳೆದರೂ ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ಮತ್ತಿತರ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಸಹಾಯಕ ಕಮಿಷನರ್ ಅವರು ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸ್ಥಳ ಭೇಟಿ ಮಾಡಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ ವಿವರ, ಕಾಮಗಾರಿ ಕೈಗೊಳ್ಳಲು ಉಂಟಾದ ಅಡಚಣೆಯ ಮಾಹಿತಿ, ಕಾಮಗಾರಿ ಮುಂದುವರೆಸಲು ಅವಶ್ಯವಿರುವ ಅನುದಾನ ಸೇರಿದಂತೆ ಮತ್ತಿತರ ಸಮರ್ಪಕ ವಿವರಗಳನ್ನು ಸಲ್ಲಿಸುವಂತೆ ತಿಳಿಸಿದ ಅವರು, ಯೋಜನೆಯ ವಿಳಂಬಕ್ಕೆ ಉಂಟಾಗಿರುವ ವರದಿಗಳ ಬಗ್ಗೆ ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ಕರೆದು ಸರಕಾರದ ಹಂತದಲ್ಲಿ ಕೂಲಂಕುಷವಾಗಿ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

    ಪೌರ ಕಾರ್ಮಿಕರುಗಳಿಗೆ ಖಾಯಂ ವಸತಿಗೃಹ ನಿರ್ಮಾಣಕ್ಕೆ 2 ಎಕರೆ ಜಾಗವನ್ನು ನಗರ ಪ್ರದೇಶದಲ್ಲಿ ಗುರುತಿಸಿ ಅವರುಗಳಿಗೆ ನೀಡುವುದರೊಂದಿಗೆ ಸಕ್ರೀಯ ಪೌರಕಾರ್ಮಿಕರು ನಗರದಲ್ಲೇ ವಾಸವಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ಸ್ವಚ್ಛ ಭಾರತ್ ಮಿಷನ್ ಯೋಜನೆಯನ್ನು ನಗರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

    ತೆರಿಗೆ ಪಾವತಿ, ನಳ್ಳಿ ನೀರಿನ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ನಿಗಧಿತ ಗುರಿ ಸಾಧನೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು. ನಗರದ ಸ್ವಚ್ಛತೆಗೆ ಸ್ಥಳೀಯಾಡಳಿತಗಳು ಮೊದಲ ಆದ್ಯತೆ ನೀಡಬೇಕು. ದಾರಿದೀಪ ಅಳವಡಿಕೆ ಅವುಗಳ ನಿರ್ವಹಣೆ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದರು.

    Click here

    Click here

    Click here

    Call us

    Call us

    ಪುರಸಭೆಗಳ ಮುಖ್ಯಾಧಿಕಾರಿಗಳು ಬೆಳಗ್ಗೆ 6 ಕ್ಕೆ ಕಚೇರಿಯಲ್ಲಿ ಹಾಜರಿದ್ದು, ಹಾಜರಾತಿ ದಾಖಲಿಸಬೇಕು. 6 ರಿಂದ 9 ರ ವರೆಗೆ ಸ್ಪಾಟ್ ಇನ್ಸ್ಪೆಕ್ಷನ್ ಕೈಗೊಳ್ಳಬೇಕು. ಅಧಿಕಾರಿಗಳು ಮಧ್ಯಾಹ್ನ 3.30 ರಿಂದ 5.30 ರ ವರೆಗೆ ಕಚೇರಿಗಳಲ್ಲಿ ಹಾಜರಿದ್ದು, ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಬೇಕು. ತಿಂಗಳಲ್ಲಿ ಒಂದು ಬಾರಿ ಸ್ಥಳೀಯ ಸಂಸ್ಥೆಗಳಿಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಭೇಟಿ ನೀಡಿ, ಅಲ್ಲಿನ ಕೆಲಸ ಕಾರ್ಯಗಳನ್ನು, ಸಮಸ್ಯೆಗಳನ್ನು ಪರಿಶೀಲಿಸಬೇಕು ಎಂದ ಅವರು ಮಧ್ಯಾಹ್ನದ ಅವಧಿಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲು / ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

    ಸಭೆಯಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ಜಿಲ್ಲಾ ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾವಳಿ ಕರ್ನಾಟಕದ ಸಾಮಾಜಿಕ ಸೇವೆಗಾಗಿ ಕಟ್ಟಬೇಲ್ತೂರಿನ ಶಿವಶಕ್ತಿ ಭಜನಾ ಮಂದಿರದಲ್ಲಿ ‘ಯೂತ್ ಫಾರ್ ಕೋಸ್ಟ್ʼ ಚಾಲನೆ

    14/10/2026

    ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್

    13/10/2026

    ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ

    13/10/2026
    Leave A Reply Cancel Reply

    five − four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಸರಳ ವಿವಾಹಕ್ಕೆ ಪ್ರೋತ್ಸಾಹಧನ – ಅರ್ಜಿ ಆಹ್ವಾನ
    • ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ
    • ಕರಾವಳಿ ಕರ್ನಾಟಕದ ಸಾಮಾಜಿಕ ಸೇವೆಗಾಗಿ ಕಟ್ಟಬೇಲ್ತೂರಿನ ಶಿವಶಕ್ತಿ ಭಜನಾ ಮಂದಿರದಲ್ಲಿ ‘ಯೂತ್ ಫಾರ್ ಕೋಸ್ಟ್ʼ ಚಾಲನೆ
    • ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್
    • ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.