Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿ, ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಲಿ: ಡಾ. ಅಶೋಕ್ ದಳವಾಯಿ
    alvas nudisiri

    ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿ, ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಲಿ: ಡಾ. ಅಶೋಕ್ ದಳವಾಯಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಕೃಷಿಯನ್ನು ಲಾಭದಾಯಕ ಹಾಗೂ ನವೀನ ಉದ್ಯಮವಾಗಿ ರೂಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಬೇಕು. ಕೃಷಿ ಮತ್ತು ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಶೀಲತೆಗೆ ವಿಪುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಅಶೋಕ್ ದಳವಾಯಿ ಹೇಳಿದರು.

    Click Here

    Click Here

    Call us

    Click Here

    ಅವರು ಮಿಜಾರ್‌ನ ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಪ್ರಥಮ ವರ್ಷದ ಬಿ.ಎಸ್ಸಿ. (ಆನರ್ಸ್) ಕೃಷಿ ಹಾಗೂ ಬಿ.ಟೆಕ್. ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಆಗಮನ ಕರ‍್ಯಕ್ರಮ ‘ದೀಕ್ಷಾರಂಭ 2026–27’ರಲ್ಲಿ ಮಾತನಾಡಿದರು.

    ವಿದ್ಯಾರ್ಥಿ ಜೀವನದ ಈ ಹಂತ ಮಹತ್ವದ್ದಾಗಿದ್ದು, ಚಂಚಲ ಮನಸ್ಸನ್ನು ನಿಯಂತ್ರಿಸಿಕೊಂಡು ಏಕಾಗ್ರತೆ, ಶಿಸ್ತು ಹಾಗೂ ಬದ್ಧತೆಯಿಂದ ಅಧ್ಯಯನ ಮಾಡಬೇಕು. ಸ್ಪಷ್ಟ ಗುರಿಗಳನ್ನು ರೂಪಿಸಿಕೊಂಡು ಅವುಗಳ ಸಾಧನೆಗೆ ನಿರಂತರ ಪರಿಶ್ರಮ ಪಡಬೇಕು ಎಂದರು.

    ಕೃಷಿ ವಿಜ್ಞಾನಿ ನಾರ್ಮನ್ ಬೋರ್ಲಾಗ್, ಡಾ. ಎಂ.ಎಸ್. ಸ್ವಾಮಿನಾಥನ್ ಹಾಗೂ ಡಾ. ವರ್ಗೀಸ್ ಕುರಿಯನ್ ಅವರ ಸಾಧನೆಗಳನ್ನು ಸ್ಮರಿಸಿದ ಅವರು, ಅವರ ಕೊಡುಗೆಗಳಿಂದ ಪ್ರೇರಣೆ ಪಡೆದು ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ವಿದ್ಯಾರ್ಥಿಗಳು ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಿರ್ವಹಣಾ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಲಭ್ಯವಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಇತರ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ತಮ್ಮ ಗುರಿ ಸಾಧನೆಗೆ ಶಿಸ್ತು, ನಿರಂತರ ಪರಿಶ್ರಮ ಹಾಗೂ ಬದ್ಧತೆ ಮುಖ್ಯ ಎಂದರು. ಡಾ. ಮೋಹನ್ ಆಳ್ವ ಅವರ ಕನಸಿನಂತೆ ಮೂಡುಬಿದಿರೆಯನ್ನು ಕೃಷಿ ಕಾಶಿಯನ್ನಾಗಿಸುವ ಉದ್ದೇಶದಿಂದ ಕೃಷಿ ಮಹಾವಿದ್ಯಾಲಯವನ್ನು ಸ್ಥಾಪಿಸಲಾಗಿದೆ. ಕೃಷಿಕರ ಬದುಕನ್ನು ಸುಧಾರಿಸುವುದು ಹಾಗೂ ಕೃಷಿ ಕ್ಷೇತ್ರದ ಪ್ರಗತಿಗೆ ನೆರವಾಗುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ಗಣ್ಯರು ಜ್ಯೋತಿ ಬೆಳಗಿಸಿ, ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ. ಅಶೋಕ್ ದಳವಾಯಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಕೃಷಿ ತಂತ್ರಜ್ಞಾನ ವಿಭಾಗದ ಡಾ. ಕೆವಿ ಸುರೇಶ್ ಇದ್ದರು. ದ್ವಿತೀಯ ವರ್ಷದ ಕೃಷಿ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ರೈತಗೀತೆ ಪ್ರಸ್ತುತಪಡಿಸಿದರು. ಕೃಷಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗುಣಭಾಗ್ಯ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಕಾಲೇಜಿನ ಡೀನ್ ಡಾ. ಎಸ್.ಎನ್. ವಾಸುದೇವನ್ ಸ್ವಾಗತಿಸಿ, ಕೃಷಿ ವಿಸ್ತರಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪೂಜಾ ವಿ. ವಂದಿಸಿದರು.

    ದೀಕ್ಷಾರಂಭ ಕಾರ್ಯಕ್ರಮವು ಅಕ್ಟೋಬರ್ 31ರವರೆಗೆ ನಡೆಯಲಿದ್ದು, ಕೃಷಿ ಹಾಗೂ ಆಹಾರ ವಿಜ್ಞಾನದ ವಿವಿಧ ವಿಷಯಗಳು ಮತ್ತು ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸಗಳನ್ನು ಆಯೋಜಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ

    13/10/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ಸಮಾರೋಪ

    13/10/2026

    ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್‌ನ 10 ವಿದ್ಯಾರ್ಥಿಗಳು ಉತ್ತೀರ್ಣ

    13/10/2026
    Leave A Reply Cancel Reply

    fifteen − four =

    Call us

    Click Here

    Call us

    Call us

    Call us
    Highest Viewed Recently
    • ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿ, ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಲಿ: ಡಾ. ಅಶೋಕ್ ದಳವಾಯಿ
    • ಕೋಟ ಅಮೃತೇಶ್ವರೀ ದೇಗುಲಕ್ಕೆ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಭೇಟಿ
    • ಗಂಗೊಳ್ಳಿ: ಪೊಲೀಸ್ ಠಾಣೆಗೆ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಅಭಿನಂದನೆ
    • ಕುಂದಾಪುರ: ಸರಳ ವಿವಾಹಕ್ಕೆ ಪ್ರೋತ್ಸಾಹಧನ – ಅರ್ಜಿ ಆಹ್ವಾನ
    • ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.